Hassan

ಹಾಸನದಲ್ಲಿಂದು ಯಡ್ಡಿ

By

September 19, 2022

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 140 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ. ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಭಾರತೀಯ ಜನತಾ ಪಾರ್ಟಿಯು ಜನಪರವಾದ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ.

ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವ ವಿಚಾರದಲ್ಲಿ ವಿರೋಧ ಪಕ್ಷಗಳು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವುದು ಬೇಡ ಎಂದ ಅವರು ಬಿಜೆಪಿ ಜನಪರವಾದ ಆಡಳಿತ ನೀಡುತ್ತಿದೆ ಎಂದು ಹೇಳಿದರು.

ಪತ್ರಿಕಾ ಗೋಷ್ಟಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್, ಶಾಸಕರಾದ ಪ್ರೀತಮ್ ಗೌಡ, ಸಕಲೇಶಪುರದ ಬಿಜೆಪಿ ಮುಖಂಡ ಸಿಮೆಂಟ್ ಮಂಜು, ನಗರ ಸಭಾಧ್ಯಕ್ಷರಾದ ಮೋಹನ್, ಹುಡಾ ಅಧ್ಯಕ್ಷರಾದ ಲಲಿತ್ ಮೂರ್ತಿ ಮತ್ತಿತರ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಸೋಲು ಕಂಡವರಿಗೆ ಕೊಕ್ ?

ಕಳೆದ ಬಾರಿ ಸೋಲು ಕಂಡ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿ ಬದಲಾವಣೆ ಬಗ್ಗೆ ಕೂಡಾ ಚಿಂತನೆಯ ಬಗ್ಗೆ ಅವರು ಈ ಸಂದರ್ಭ ಪ್ರಸ್ತಾಪ ಮಾಡಿರುವುದಾಗಿ ತಿಳಿದು ಬಂದಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಬಲವಾಗಿದ್ದಾಗ ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿತ್ತು.

ಹಾಸನದಲ್ಲಿ ಜೆಡಿಎಸ್‌ನ ಭದ್ರ ಕೋಟೆಯನ್ನು ಪ್ರೀತಮ್ ಗೌಡ ಮುರಿದು ಜಯಶಾಲಿಯಾಗಿದ್ದರು. ಆದರೆ ಸಕಲೇಶಪುರದಲ್ಲಿ ಬಿಜೆಪಿ ಸೋಲು ಕಂಡಿತ್ತು. ಈ ನಿಟ್ಟಿನಲ್ಲಿ ಹಲವಾರು ಕ್ಷೇತ್ರಗಳಲ್ಲಿ ಕಳೆದ ಬಾರಿಯ ಬಿಜೆಪಿ ಅಭ್ಯರ್ಥಿಗಳಿಗೆ 2023ನೇ ಸಾಲಿನ ವಿಧಾನ ಸಭಾ ಚುನಾವಣೆಯಲ್ಲಿ ಚುನಾವಣೆಗೆ ನಿಲ್ಲಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ತಿಳಿದು ಬಂದಿದೆ.