ಹಾಸನ: ಮುಂಬರುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮಂಗಳವಾರ ಬಿಡುಗಡೆ ಮಾಡಿದೆ.ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಬಹುಜನ್ ಬೇಲೂರು ಕ್ಷೇತ್ರದಿಂದ, ಬಿಎಸ್ಪಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ಅರಕಲಗೂಡು ಕ್ಷೇತ್ರದಿಂದ, ಹೊಳೆನರಸೀಪುರದಿಂದ
ತಾರೇಶ್ ಎಚ್.ಎಸ್. ಕಣಕ್ಕಿಳಿಯಲಿದ್ದಾರೆ ಎಂದು ಬಿಎಸ್ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಂ. ಕೃಷ್ಣಮೂರ್ತಿ ಹೇಳಿದ್ದಾರೆ.ಏಪ್ರಿಲ್ 10ರೊಳಗೆ ಉಳಿದ ಎಲ್ಲ ಕ್ಷೇತ್ರಗಳ
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.