ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಒಪ್ಪಿಗೆ ನೀಡಿದೆ. 18 ತಿಂಗಳಿನಿಂದ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು.ಬುಧವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.
ಸರ್ಕಾರಿ ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. 6 ಚಕ್ರ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ ವರದಿಯನ್ನು ಆಧರಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. 18 ತಿಂಗಳ ಬಳಿಕ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಆರಂಭವಾಗಲಿದೆ.