ಚಿಕ್ಕಮಗಳೂರು/ಹಾಸನ : 19/5/2022 ರಂದು ಚಿಕ್ಕಮಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾದ್ಯಮಕ್ಕೆ , ಚಿಕ್ಕಮಗಳೂರು
ಬೇಲೂರು, ಹಾಸನ ಸಂಪರ್ಕಿಸುವ ರೈಲು ಮಾರ್ಗ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಬಯಲು ರಂಗಮಂ ದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ 384 ಕೋಟಿ ರೂ.ವೆಚ್ಚದ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.