ಹಾಸನ : ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಸೆ.7(2021)ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು
ಶೇರ್ ಮಾಡಿ ನಿಮ್ಮ ಸ್ನೇಹಿತರಿಗೆ ಯಾರು SI ಆಗಬಯಸಿರುವರಿಗೆ ಈ ಉಪಯುಕ್ತ ಮಾಹಿತಿ