ಕೌಶಲ್ಯಾಧಾರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

0

ಹಾಸನ ಸೆ.16 : ಕೋವಿಡ್-19 ಸಾಂಕ್ರಾಮಿಕ ರೋಗವು ಸಂಪೂರ್ಣ ದೇಶವನ್ನು ಆವರಿಸಿಕೊಂಡಿದ್ದು, ಆರೋಗ್ಯ ವಲಯದಲ್ಲಿ ಕಾರ್ಯನಿರ್ವಹಿಸಲು ಸಾಕಷ್ಟು ನುರಿತ ಆರೋಗ್ಯ ತಂತ್ರಜ್ಞರ ಅವಶ್ಯಕತೆ ಇರುತ್ತದೆ. ಅದರಂತೆ ಆರೋಗ್ಯ ವಲಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ತಂತ್ರಜ್ಞರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡುವುದು ಅವಶ್ಯಕವಾಗಿರುತ್ತದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶನದಂತೆ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ( ಪಿ.ಎಂ.ಕೆ.ವಿ.ವೈ 3.0) ಯ ಅಡಿಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಹಾಸನ ಇವರಿಂದ ಕೌಶಲ್ಯಾಧಾರಿತ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು ಎಂದು  ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪಾಸಾದ ಯುವಕ-ಯುವತಿಯರಿಗೆ, ಜನರಲ್ ಡ್ಯೂಟಿ ಅಸಿಸ್ಟೆಂಟ್ , ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸ್( ಕ್ರಿಟಿಕಲ್ ಕೇರ್ ), ಹೋಂ ಹೆಲ್ತ್ ಏಡ್, ಮೆಡಿಕಲ್ ಇಕ್ವಿಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (ಐ.ಟಿ.ಐ ಡಿಪ್ಲೋಮ ಪಾಸಾದವರಿಗೆ ಆದ್ಯತೆ) ಪಿ.ಯು.ಸಿ ಪಾಸಾದ ಯುವಕ-ಯುವತಿಯರಿಗೆ, ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್-ಬೇಸಿಕ್, ಫೆಲೋಬೋಟಮಿಸ್ಟ್ ಪಿ.ಯು.ಸಿ (ಸೈನ್ಸ್) ಪಾಸಾದವರು. 

ಈ ವೃತ್ತಿ ತರಬೇತಿ ಅಲ್ಪಾವಧಿಯದ್ದಾಗಿದ್ದು, ತರಬೇತಿಯನ್ನು ಜಿಲ್ಲಾ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರ/ಖಾಸಗಿ ಆಸ್ಪತ್ರೆಗಳಲ್ಲಿ ನೀಡಬಹುದಾಗಿರುತ್ತದೆ. 18 ರಿಂದ 45 ವರ್ಷ ವಯೋಮಿತಿಯೊಳಗಿನ ಆಸಕ್ತ ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಸಿಬ್ಬಂದಿಗಳ ಮೊಬೈಲ್‍ಗಳಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.

ಮೊ.ನಂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು: 8861646939 ಅಥವಾ ಸಹಾಯಕ ನಿರ್ದೇಶಕರು: 9844552919/9008509040, ಅಥವಾ ಆನ್ ಲೈನ್ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

#freecoureseshassan #hassan #hassannews #ಉಚಿತತರಬೇತಿಕೋರ್ಸುಗಳಮಾಹಿತಿಹಾಸನ

LEAVE A REPLY

Please enter your comment!
Please enter your name here