ಹಾಸನ/ಚನ್ನರಾಯಪಟ್ಟಣ: ಮೊರಾರ್ಜಿ ದೇಸಾಯಿ ಬಾಲಕಿಯರ ಸರ್ಕಾರಿ ವಸತಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ವಿಜ್ಞಾನ ( PCMB) , ವಾಣಿಜ್ಯ (HEBA) ಆಂಗ್ಲ ಮಾಧ್ಯಮ ವಿಭಾಗ ದಾಖಲಾತಿಗೆ ಅರ್ಜಿ ಆಹ್ವಾನದ ಮಾಹಿತಿ
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗ ಶೇ 75 ಹಾಗೂ ಪರಿಶಿಷ್ಟ ಜಾತಿ, ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (OBC) ಶೇ 25 ಸೀಟು ಲಭ್ಯವಿದ್ದು, ಅರ್ಜಿ ಹಾಗೂ ಮಾಹಿತಿಗೆ ಮೊರಾರ್ಜಿ ದೇಸಾಯಿ ಬಾಲಕಿಯರ ಸರ್ಕಾರಿ ವಸತಿ ಪದವಿ ಪೂರ್ವ ಕಾಲೇಜು ಸಂಪರ್ಕಿಸಲು ಈ ಮೂಲಕ ಕರೆ ನೀಡಲಾಗಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಗುರುಮಾರನಹಳ್ಳಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 60 ಸೀಟುಗಳಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು, ಆಕಾಶವಾಣಿ ಹಿಂಭಾಗ :
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ದೂ.08172-268373 / 08172-267373
ಹಾಸನ: ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯಲ್ಲಿರುವ ನಾಲ್ಕು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6 ನೇ ತರಗತಿ ದಾಖಲಾತಿಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಏ. 30ರವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಉಚಿತ ಸೇವೆ ಪಡೆಯಲು ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಗೆ ಭೇಟಿ ನೀಡಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾಹಿತಿಗೆ ಇಲಾಖೆಯ ಸಹಾಯವಾಣಿ 8277799990 ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಕಾಶವಾಣಿ ಹಿಂಭಾಗ, ಹಾಸನ. ದೂ.ಸಂ 08172-268373/ 08172-267373 ಗೆ ಸಂಪರ್ಕಿಸಬಹುದು