ಹಾಸನ : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಗರದ ಎಂ.ಜಿ. ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2021/22ನೇ ಸಾಲಿಗೆ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಲೇಜು ಪ್ರಾಂಶುಪಾಲ ಡಾ.ಕೆ.ಟಿ. ಕೃಷ್ಣೇಗೌಡ ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪದವಿ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕಾಲೇಜಿನಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿಎಸ್ಸಿ ಹಾಗೂ ಬಿ.ಸಿ.ಎ ಪದವಿ ಕೋರ್ಸ್ಗಳು ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ಕಾಲೇಜಿನ ವೆಬ್ ಸೈಟ್ ದೂರವಾಣಿ 08172-232946 ಸಂಪರ್ಕಿಸಬಹುದು