ಹಾಸನ.ಜ.21(ಹಾಸನ್_ನ್ಯೂಸ್) !, ಜಿಲ್ಲೆಯಲ್ಲಿಂದು ಹೊಸದಾಗಿ 22 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,374 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 73 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 27,836 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 8 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೋವಿಡ್ನಿಂದ ಒಂದು ಸಾವು ಸಂಭವಿಸಿಲ್ಲ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 465 ಮಂದಿ ಸಾವನ್ನಪ್ಪಿದಾರೆ.
ಇಂದು ಪತ್ತೆಯಾದ 22 ಕೋವಿಡ್ ಪ್ರಕರಣಗಳಲ್ಲಿ ಅರಸೀಕೆರೆ ತಾಲ್ಲೂಕಿನಲ್ಲಿ 6 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 2 ಮಂದಿ, ಹಾಸನ ತಾಲ್ಲೂಕಿನಲ್ಲಿ 9 ಮಂದಿ, ಹೊಳೆನರಸೀನಪರ ತಾಲ್ಲೂಕಿನಲ್ಲಿ 2 ಮಂದಿ, ಬೇಲೂರು, ಆಲೂರು, ಸಕಲೇಶಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಕೋವಿಡ್ ದೃಡ ಪಟ್ಟಿದೆ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್