ಜಿಲ್ಲೆಯಲ್ಲಿಂದು ಹೊಸದಾಗಿ 25 ಕೋವಿಡ್ ಪ್ರಕರಣಗಳು ಪತ್ತೆ #covidupdateshassan

    0

    ಹಾಸನ.ಮಾ.17(ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 25 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,891 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 110 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈವರೆಗೆ 28,313 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 468 ಮಂದಿ ಸಾವನ್ನಪ್ಪಿದ್ದಾರೆ.

    ಇಂದು ಪತ್ತೆಯಾದ 25 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ  9 ಮಂದಿ, ಹೊಳೆನರಸೀಪುರ 5 ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 3 ಮಂದಿ, ಚನ್ನರಾಯಪಟ್ಟಣ 3 ಮಂದಿ ಆಲೂರು 2 ಮಂದಿ, ಅರಕಲಗೂಡು, ಬೇಲೂರು, ಸಕಲೇಶಪುರ  ತಲಾ ಒಬ್ಬರಿಗೆ ಕೋವಿಡ್ ಪ್ರಕರಣಗಳು ದೃಡಪಟ್ಟಿದೆ. –  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್

    LEAVE A REPLY

    Please enter your comment!
    Please enter your name here