ಹಾಸನ ಮಾ. (ಹಾಸನ್_ನ್ಯೂಸ್ !,
ನಗರದ ಜಿಲ್ಲಾ ಕ್ರೀಡಾಂಗಣದ ಮುಂಭಾಗ ಮಾ.16 ರಂದು ನಡೆದ ಸಂತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಆರೋಗ್ಯದ ಅರಿವು ಹಾಗೂ ಆರೋಗ್ಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಈ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಸತೀಶ್ ಕುಮಾರ್ ಉದ್ಘಾಟಿಸಿದರು.
ಎಲ್ಲಾ ರಾಷ್ಟ್ರೀಯಾ ಆರೋಗ್ಯ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಅರಿವು ಮಾಡಿಸುವುದು ಆರೋಗ್ಯ ವಸ್ತು ಪ್ರದರ್ಶನದ ಮುಖ್ಯ ಉದ್ದೇಶವಾಗಿದ್ದು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡದವರಿಂದ ನಾಟಕ, ಕರೋನ ಗೀತೆ, ತಂಬಾಕು ನಿಷೇದ, ತಾಯಿಮಕ್ಕಳ ಆರೋಗ್ಯ ಬಗ್ಗೆ ಅರಿವು ಮೂಡಿಸಲಾಯಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮಂಜುಳಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿಯಾದ ಅರುಂಧತಿ, ಜಿಲ್ಲಾ ತಂಬಾಕು ಕೋಶದ ಮೇಲ್ವಿಚಾರಕಾರದ ಮಮತಾ ಹಾಗೂ ಮತ್ತಿತರರು ಹಾಜರಿದ್ದರು.