ಜಿಲ್ಲೆಯಲ್ಲಿಂದು ಹೊಸದಾಗಿ 10 ಕೋವಿಡ್ ಪ್ರಕರಣಗಳು ಪತ್ತೆ : ಒಟ್ಟಾರೆ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ ??

0

ಹಾಸನ ಫೆ.22(ಹಾಸನ್_ನ್ಯೂಸ್ !! ,  ಜಿಲ್ಲೆಯಲ್ಲಿಂದು ಹೊಸದಾಗಿ 10 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,684 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 61 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
      
ಈವರೆಗೆ 28,157 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 5 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 466 ಮಂದಿ ಸಾವನ್ನಪ್ಪಿದಾರೆ.
         
ಇಂದು ಪತ್ತೆಯಾದ 10 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 3 ಮಂದಿ, ಬೇಲೂರು  ತಾಲ್ಲೂಕಿನಲ್ಲಿ 2 ಮಂದಿ, ಆಲೂರು ತಾಲ್ಲೂಕಿನಲ್ಲಿ 2 ಮಂದಿ,  ಅರಸೀಕೆರೆ ತಾಲ್ಲೂಕಿನಲ್ಲಿ 2 ಮಂದಿ  ಹಾಗೂ ಹೊಳೆನರಸೀಪುರ ತಾಲ್ಲೂಕಿನಲ್ಲಿ ಒಬ್ಬರಿಗೆ  ಕೋವಿಡ್ ದೃಡ ಪಟ್ಟಿದೆ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here