ಹಾಸನ ಫೆ.24(ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 8 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,696 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 63 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 28,167 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 5 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 466 ಮಂದಿ ಸಾವನ್ನಪ್ಪಿದಾರೆ.
ಇಂದು ಪತ್ತೆಯಾದ 8 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 3, ಬೇಲೂರು ತಾಲ್ಲೂಕಿನಲ್ಲಿ 2 ಮಂದಿ,ಅರಕಲಗೂಡು ,ಸಕಲೇಶಪುರ ಹಾಗೂ ಇತರ ಜಿಲ್ಲೆ ಒಬ್ಬರಿಗೆ ಕೋವಿಡ್ ದೃಡಪಟ್ಟಿದೆ -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.