ಇಂದು ಚನ್ನರಾಯಪಟ್ಟಣ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಹಿರಿಸಾವೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ
ಉದಯಪುರದ ಕೋವಿಡ್ ಆಸ್ಪತ್ರೆಗಳಿಗೆ ತೆರಳಿ ಪರಿಶೀಲನೆ ನಡೆಸಿದ ಸಂಸದ ಪ್ರಜ್ವಲ್ ರೇವಣ್ಣ
ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ, RTPCR ರಿಪೋರ್ಟ್ ತಡವಾಗಿ ಬರುತ್ತಿದ್ದು, ರೆಮಿಡಿಸಿವರ್ ಇಂಜೆಕ್ಷನ್ ಪೂರೈಕೆ, ಹೆಚ್ಚುವರಿ ಮೆಡಿಕಲ್ ಸ್ಟಾಫ್ ಗಳ ಅಗತ್ಯತೆ, ಬೆಡ್ ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು
ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಂದರು
ಈ ಸಂದರ್ಭದಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎನ್. ಬಾಲಕೃಷ್ಣ ರವರು,
ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಕುಮಾರ್ ರವರು,
ತಾಲ್ಲೂಕು ಆರೋಗ್ಯಾಧಿಕಾರಿ ಕಿಶೋರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.