ಕೋವಿಡ್ ಎರಡನೇ ಅಲೆ ಹಾಸನಕ್ಕ ಬರದಂತೆ ತಡೆಗಟ್ಟಲು ಕ್ರಮ ವಹಿಸಲು ಸೂಚನೆ 👇

0

ಹಾಸನ ಮಾ.01(ಹಾಸನ್_ನ್ಯೂಸ್ !, ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಹೊರ ರಾಜ್ಯದಿಂದ  ನೇರವಾಗಿ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಆರ್.ಟಿ,ಪಿ.ಸಿ.ಆರ್. ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಜಿಲ್ಲಾ  ಉಸ್ತುವಾರಿ ಕಾರ್ಯಾದರ್ಶಿ ಹಾಗೂ ಬೆಂಗಳೂರು ಪ್ರಾದೇಶಿಕ ಅಯುಕ್ತರಾದ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ಅವರು ಪ್ರತಿ ನಿತ್ಯ ಮಹಾರಾಷ್ಟದಿಂದ ಚನ್ನರಾಯಪಟ್ಟಣ ತಾಲ್ಲೂಕಿಗೆ 6 ಬಸ್ಸು ಹಾಗೂ ಕೇರಳದ ಮಾನಂತವಾಡಿಯಿಂದ ಅರಕಲಗೂಡು ತಾಲ್ಲೂಕಿಗೆ 2 ಬಸ್ಸು ಆಗಮಿಸುತ್ತವೆ ಈ ಬಸ್ಸುಗಳಲ್ಲಿ ಆಗಮಿಸುವ ಪ್ರತಿಯೋಬ್ಬ ಪ್ರಯಾಣಿಕರ ಮೇಲು ನಿಗವಹಿಸಲು ಕಾರ್ಯಾಚರಣೆಗಾಗಿ ತಹಸೀಲ್ದಾರ್,  ತಾಲ್ಲೂಕು ಆರೋಗ್ಯಧಿಕಾರಿ ,ಪ್ರಾದೇಶಿಕ ಸಾರಿಗೆ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ತಂಡ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು..
ಕೇರಳ ಮೂಲದಿಂದ ಬಂದು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನರ್ಸಿಂಗ್ ವಿದ್ಯಾರ್ಥಿಗಳನ್ನು  ಕಡ್ಡಾಯವಾಗಿ ಪರೀಕ್ಷೆ  ಮಾಡಿಸುವಂತೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಿಗೆ ಆದೇಶವನ್ನು ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಕಂದಾಯ, ಪಂಚಾಯ್ ರಾಜ್ ,ಹಾಗೂ ಪೋಲಿಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳು  ಲಸಿಕೆ ಹಾಕಿಸಿಕೊಳ್ಳುವಂತೆ ಕ್ರಮ ವಹಿಸಲು ಸೂಚಿಸಿದರು. ವಿದ್ರ್ಯಾಥಿ ನಿಯಲದಲ್ಲಿ ಇರುವ ವಿದ್ರ್ಯಾಥಿ ಪ್ರತಿ ತಿಂಗಳು 15 ದಿನಕೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೈತರಿಂದ  ಬೆಂಬಲ ಬೆಲೆ ಯೋಜನೆಯೋದಿಗೆ ಖರೀದಿಸಿದ ರಾಗಿ ಮತ್ತು ಭತ್ತವನ್ನು ವ್ಯವಸ್ಥಿತವಾಗಿ ದಾಸ್ತಾನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಆರ್ ಗಿರೀಶ್ ಮಾತನಾಡಿ ಬೆಂಬಲ ಬೆಲೆಯೊಂದಿಗೆ ರಾಗಿ ಹಾಗೂ ಭತ್ತ ಖರೀದಿ ಮಾಡುವ ವೇಳೆಯಲ್ಲಿ ರೈತರಿಗೆ ತೊಂದರೆ ಉಂಟಾಗದಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಕಲೇಶಪುರ ಭಾಗದಲ್ಲಿ ಹೆಚ್ಚಿನ ಪ್ರವಾಸಿ ತಾಣಗಳು ಇದ್ದು ಅರಣ್ಯ ವ್ಯಾಪ್ತಿಗೆ ಸೇರುತ್ತವೆ ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ರಕ್ಷಣೆಯೊಂದಿಗೆ ಪ್ರವಾಸಕ್ಕೆ ಅನುವು ಮಾಡಿಕೊಡುವ ಉದ್ದೇಶವನ್ನು ಜಿಲ್ಲಾಧಿಕಾರಿಗಳು ಕಾರ್ಯದರ್ಶಿಯವರಿಗೆ ಗಮನಕ್ಕೆ ತಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್, ಜಿಲ್ಲಾ  ಆರೋಗ್ಯ ಮತ್ತು ಕುಂಟುಬ ಕಲ್ಯಾಣಧಿಕಾರಿ ಡಾ|| ಸತೀಶ್,  ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕರಾದ ಡಾ|| ರವಿ ಕುಮಾರ್ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here