ಹಾಸನ ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆ 2ನೇ ಡೋಸ್ ಯಾವಾಗ ತೆಗೆದು ಕೊಳ್ಳಬಹುದು ಎಂದು ಸ್ಪಷ್ಟನೆ

0

ಹಾಸನ : (ಹಾಸನ್_ನ್ಯೂಸ್ !, ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಛೇರಿಯ ಪ್ರಕಟಣೆ..

ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ ಕೋವಿಡ್-19 ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್-19 ಲಸಿಕೆ ನೀಡಲಾಗುತ್ತಿದ್ದು, ಕೋವ್ಯಾಕ್ಸಿನ್ ಮೊದಲನೇ ಡೋಸ್ ಲಸಿಕೆ ಪಡೆದಿರುವ ಸಾರ್ವಜನಿಕರು 6 ವಾರಗಳ ನಂತರ 2ನೇ ಡೋಸ್ ಲಸಿಕೆ ಪಡೆಯಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವಂತೆ ಕ್ರಮ ವಹಿಸಲಾಗಿದ್ದು, ಮೊದಲನೇ ಡೋಸ್ ಪಡೆದು 6 ವಾರ ಪೂರ್ಣಗೊಂಡಿರುವ ಸಾರ್ವಜನಿಕರು ಕೋವ್ಯಾಕ್ಸಿನ್ 2ನೇ ಡೋಸ್ ಪಡೆಯುವಂತೆ ಈ ಮೂಲಕ ತಿಳಿಸಿದೆ.

-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಹಾಸನ

LEAVE A REPLY

Please enter your comment!
Please enter your name here