ಜಿಲ್ಲೆಯಲ್ಲಿಂದು ಹೊಸದಾಗಿ 13 ಕೋವಿಡ್ ಪ್ರಕರಣಗಳು ಪತ್ತೆ
ಹಾಸನ.ಮಾ.05(ಕರ್ನಾಟಕವಾರ್ತೆ):- ಜಿಲ್ಲೆಯಲ್ಲಿಂದು ಹೊಸದಾಗಿ 13 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,771 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 76 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 28,228 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 467 ಮಂದಿ ಸಾವನ್ನಪ್ಪಿದಾರೆ.
ಇಂದು ಪತ್ತೆಯಾದ 13 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 8 ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 2 ಮಂದಿ, ಅರಕಲಗೂಡು ತಾಲ್ಲೂಕಿನಲ್ಲಿ 2 ಮಂದಿ, ಹಾಗೂ ಹೊಳೆನರಸೀಪುರ ತಾಲ್ಲೂಕಿನಲ್ಲಿ ಒಬ್ಬರಿಗೆ ಕೋವಿಡ್ ದೃಡಪಟ್ಟಿದೆ -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್