ಮಾಸ್ಕ್ ಹಾಕಿಕೊಳ್ಳದೆ ಇರುವವರಿಗೆ ದಂಡ ವಿಧಿಸುವಂತೆ ತಹಶಿಲ್ದಾರ್ ಸೂಚನೆ

0

ಸಕಲೇಶಪುರ: ಕೊವಿಡ್ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಹಾಕಿಕೊಳ್ಳದೆ ಇರುವವರಿಗೆ ದಂಡ ವಿಧಿಸುವಂತೆ ತಹಶೀಲ್ದಾರ್‌ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಜಯಕುಮಾರ್ ರವರು ಸೂಚನೆ ನೀಡಿದರು.ಕೋವಿಡ್ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಸರನ್ಸ್ ನಲ್ಲಿ ಪಾಲ್ಗೊಂಡು ನಂತರ ತಾಲ್ಲೂಕು ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಕೆಲವೊಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಮಾಸ್ಕ್ ಧರಿಸಿಕೊಳ್ಳದೆ ಓಡಾಟ ನಡೆಸುವವರಿಗೆ ಪೊಲೀಸ್ ಇಲಾಖೆ, ಪಟ್ಟಣ ವ್ಯಾಪ್ತಿಯಲ್ಲಿ ಪುರಸಭೆಯ ಮುಖ್ಯ ಅಧಿಕಾರಿಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದಂಡ ವಿಧಿಸುವಂತೆ ಸೂಚಿಸಿದರು.ಕೋವಿಡ್ ಪರೀಕ್ಷೆಗಾಗಿ ಬರುವವರು ತಮ್ಮ ಜೊತೆಗೆ ಕರೆದುಕೊಂಡು ಬರುವವರ ಪೂರ್ಣ ಮಾಹಿತಿಯನ್ನು ಕೂಡ ನೀಡಬೇಕಾಗುತ್ತದೆ. ಒಂದು ವೇಳೆ ಪರೀಕ್ಷೆಗೆ ಬಂದವರಿಗೆ ಪಾಸಿಟಿವ್ ರಿಪೋರ್ಟ್ ಬಂದರೆ ಅವರ ಪ್ರಾಥಮಿಕ ಸಂಪರ್ಕದಲ್ಲಿರುವವನ್ನು ಗುರುತಿಸಲು ಸುಲಭವಾಗಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here