ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಜಿಲ್ಲಾ ಕಚೇರಿಯಿಂದ ಸಾಲ ಸೌಲಭ್ಯ ಅ.29 ರೊಳಗೆ ಸಲ್ಲಿಸಿ ಸದುಪಯೋಪಡೆದುಕೊಳ್ಳಿ

0

ಹಾಸನ : (ಹಾಸನ್_ನ್ಯೂಸ್) !, ಅ.08 : ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಬೈರಾಗಿ(ಬಾವ), ಬಾಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ ಬುಡಬುಡಕಿ-ಜೋಷಿ_ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊಂದಳಿ, ಪುಲ್‍ಮಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್ಶಿಕಾರಿ, ಪಾಂಗ್ಯುಯಲ್, ಜೋಷಿ (ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡ, ವಾಸುದೇವ್, ವಾಡ್, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ(ಬುರ್ ಬುರ್‍ಚ), ಹಾವಗಾರ್ (ಹಾವಾಡಿಗಾರ್), ಪಿಚಗುಂಟಲ, ಮಸಣಿಯ ಯೋಗಿ, (ಬೆಸ್ತರ್), ಬುಂಡಬೆಸ್ತ, ಕಟಬು, ದರ್ವೇಶ್, ಕಾಶಿ ಕಪಾಡಿ, ದೊಂಬಿದಾಸ ಮತ್ತು ಬೈಲ್ ಪತರ್ ಸಮಾಜದವರ ಆರ್ಥಿಕ ಅಭಿವೃದ್ಧಿಗಾಗಿ 2020-21ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ. ಭೂ ಖರೀದಿ ಯೋಜನೆ ಹಾಗೂ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ನಿಮ್ಮ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅ.29 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಆಯಾ ಜಿಲ್ಲಾ ಕಚೇರಿಗಳನ್ನು ಅಥವಾ ನಿಗಮದ ಮೇಲ್ಕಂಡ ವೆಬ್‍ಸೈಟ್‍ನಲ್ಲಿ ಸಂಪರ್ಕಿಸುವಂತೆ ತಿಳಿಸಲಾಗಿದೆ.

#supportlocal #hassanites #hassan

LEAVE A REPLY

Please enter your comment!
Please enter your name here