ಮಸೀದಿಗೆ ನುಗ್ಗಿ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದ ಖದೀಮ

0

ಹಾಸನ : ಕಳ್ಳತನಕ್ಕೆ ಬೇಕಾದ ಶಸ್ತ್ರಾಸ್ತ್ರ ಸಮೇತ ಮಸೀದಿಗೆ ನುಗ್ಗಿದ ಖತರ್ನಾಕ್ ಕಳ್ಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದಿರುವ ಘಟನೆ ಹಾಸನ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ.

ತಡರಾತ್ರಿ 12ಗಂಟೆ ಸುಮಾರಿಗೆ ಖುಬಾ ಮಸೀದಿಗೆ ಬಂದಿರುವ ಕಳ್ಳ ಕೆಲಕಾಲ ಹೊಂಚು ಹಾಕಿದ್ದಾನೆ. ನಂತರ ಗೇಟ್ ಹಾರಿ ಒಳಬಂದಿರುವ ಚೋರ ಮಸೀದಿಯ ಮುಖ್ಯದ್ವಾರದ ಬೀಗ ಮುರಿದು ಹುಂಡಿ ಕದಿಯಲು ಯತ್ನಿಸಿದ್ದಾನೆ. ಇದು ಸಾಧ್ಯವಾಗದಿದ್ದಾಗ ಮಸೀದಿಯ ಕಚೇರಿಯ ಬೀಗ ಮುರಿದು ಒಳನುಗ್ಗಿದ್ದಾನೆ. ಅಲ್ಲಿದ್ದ ಕಂಪ್ಯೂಟರ್ ಹಾಗೂ ಬೆಲೆಬಾಳುವ ಕೆನಾನ್ ಕ್ಯಾಮೆರಾವನ್ನು ಕದ್ದೊಯ್ದಿದ್ದಾನೆ. ಕಳ್ಳತನದ ಬಹುತೇಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂದಾಜು 3 ಲಕ್ಷ ರೂ. ಬೆಲೆಬಾಳುವ ಕಂಪ್ಯೂಟರ್, ಕ್ಯಾಮೆರಾ ಕಳುವಾಗಿದೆ. ರಾತ್ರಿ ಮಳೆ ಬರುತ್ತಿದ್ದ ಕಾರಣ ಪ್ರಮುಖ ಪತ್ರಿಕೆಯ ಛಾಯಾಗ್ರಾಹಕ ಅತೀಕ್ ಉ‌ ರೆಹಮಾನ್ ತಮ್ಮ ಕ್ಯಾಮೆರಾವನ್ನು ಮಸೀದಿಯ ಕಚೇರಿಯಲ್ಲಿಟ್ಟು ಮನೆಗೆ ತೆರಳಿದ್ದರು. ಆ ಕ್ಯಾಮೆರಾದೊಂದಿಗೆ ಕಳ್ಳ ಎಸ್ಕೇಪ್ ಆಗಿದ್ದಾನೆ

ಕಳೆದ 3 ತಿಂಗಳ ಅವಧಿಯಲ್ಲಿ ಇದೇ ಮಸೀದಿಯಲ್ಲಿ 3 ಬಾರಿ ಕಳ್ಳತನವಾಗಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here