ಸಿಡಿಮದ್ದುಗಳು ಅದಕ್ಕೆ ಬೇಕಾಗುವ ಸಾಮಗ್ರಿಗಳ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ : ಚನ್ನರಾಯಪಟ್ಟಣದಲ್ಲಿ ಇಬ್ಬರ ಬಂಧನ

0

ಹಾಸನ / ಚನ್ನರಾಯಪಟ್ಟಣ : ಅಪಾಯಕಾರಿ ಮತ್ತು ಪ್ರಾಣ ಹಾನಿ ಉಂಟು ಮಾಡುವ ಸಿಡಿಮದ್ದು ಮತ್ತು ಅದಕ್ಕೆ ಬೇಕಾಗುವ ಸಾಮಗ್ರಿಗಳನ್ನು ಮನೆಯಲ್ಲೇ ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಚನ್ನರಾಯಪಟ್ಟಣದ ಹಳೇ ಪೋಸ್ಟ್ ಆಫೀಸ್ ರಸ್ತೆಯ ಕೆರೆಬೀದಿಯ ವಾಸಿಗಳಾದ ನಯಾಜ್ ಮತ್ತು ಮುಜಾಹಿದ್ ಎಂಬುವವರು ಮನೆಯಲ್ಲಿ ಸಿಡಿಮದ್ದುಗಳು ಮತ್ತು ಅದಕ್ಕೆ ಬೇಕಾಗುವ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಸುಪ್ರೀತ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ , ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದರು.

ದೇಶಾದ್ಯಂತ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಕೂಡ ಮುಂಜಾಗ್ರತಾ ಕ್ರಮವಾಗಿ ಇಬ್ಬರನ್ನು ಬಂಧಿಸಲಾಗಿದ್ದು, ಅವರ ಮನೆಗಳನ್ನು ಶೋಧ ನಡೆಸಲಾಗಿದ್ದು, ಜೊತೆಗೆ ಪಿಎಫ್‌ಐ ಕಚೇರಿಗೆ ಬೀಗಮುದ್ರೆ ಹಾಕಲಾಗಿದೆ ಎಂದರು.

LEAVE A REPLY

Please enter your comment!
Please enter your name here