CRIME DAIRY HASSAN

ಗಾಯಗೊಂಡಿರುವ ಪೊಲೀಸ್ ಕಾನ್ಸ್‌ಟೇಬಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ

By

November 03, 2022

ಹಾಸನ: ಗಲಾಟೆ ಮಾಡಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್‌ಟೇಬಲ್‌ಗೆ ಚಾಕುಹಿರಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿ ರುವ ಘಟನೆ ಹಾಸನದ ದಾಸರ ಕೊಪ್ಪಲಿನಲ್ಲಿ ನಡೆದಿದೆ. ಲೋಹಿತ್ ಗಾಯಗೊಂ ಡಿರುವ ಪೊಲೀಸ್ ಕಾನ್ಸ್‌ಟೇಬಲ್‌,

ಲೋಹಿತ್‌ ಸಕಲೇಶಪುರ ನಗರ ಪೊಲೀಸ್‌ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ತಮ್ಮ ಸಂಬಂಧಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹಾಸನ ದ ದಾಸರಕೊಪ್ಪಲಿಗೆ ಬಂದಿದ್ದರು. ಸಾವಿನ ಮನೆಯ ಬಳಿ ಕೆಲ ಯುವಕರು ಗಲಾಟೆ ಮಾಡುತ್ತಿದ್ದು, ಈ ವೇಳೆ ಕಾನ್ಸ್‌ಟೇಬಲ್ ಲೋಹಿತ್ ಇಲ್ಲಿ ಗಲಾಟೆ ಮಾಡಬೇಡಿ ಎಂದು ಯುವಕರಿಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ ಆದರೆ.,

ತಕ್ಷಣಕ್ಕೆ ಯುವಕರು ಆ ಸ್ಥಳದಿಂದ ತೆರಳಿದ್ದು, ಮತ್ತೆ ವಾಪಸ್ ಬಂದು ಕಾನ್ಸ್‌ಟೇಬಲ್ ಲೋಹಿತ್‌ಗೆ ಚಾಕುವಿನಿಂದ

ಇರಿದಿದ್ದಾರೆ. ಗಾಯಾಳು ಕಾನ್ಸ್ ಟೇಬಲ್ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಆರೋಪಿಗಳಾದ ಪ್ರಕಾಶ್ ಹಾಗೂ ಪುನೀತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.