Breaking News

ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡು ಇದ್ದವ ಅಂದರ್

By

November 03, 2022

ಸಕಲೇಶಪುರ : ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ 7 ವರ್ಷಗಳ ಕಾಲ ತಲೆ ಮೆರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸಕಲೇಶಪುರ ನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ.

   ತಾಲೂಕಿನ ಮಠಸಾಗರ ಗ್ರಾಮದ ಚಂದ್ರಶೇಖರ್ (30) ಬಂಧಿತ ಆರೋಪಿಯಾಗಿದ್ದಾನೆ. ಡಿ.ವೈ.ಎಸ್.ಪಿ ಮಿಥುನ್, ವೃತ್ತ ನಿರೀಕ್ಷಕ ಚೈತನ್ಯ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿ.ಎಸ್.ಐ ಶಿವಶಂಕರ್, ಹೆಚ್ಚುವರಿ ಪಿ.ಎಸ್.ಐ ಮಲ್ಲಪ್ಪ,ಪೇದೆ ರವಿ, ಚಾಲಕ ರಘುರವರುಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಚಂದ್ರಶೇಖರ್ ಬಂಧಿತ ಆರೋಪಿ. 2016ರಲ್ಲಿ ಈತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಅಂದಿನಿಂದಲೂ ತಲೆಮರೆಸಿ ಕೊಂಡಿದ್ದ ಆರೋಪಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡು ಇದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.