ಹಾಸನ ಮೇ 22 (ಹಾಸನ್_ನ್ಯೂಸ್ !, ಚನ್ನರಾಯಪಟ್ಟಣ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ,
ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಭೇಟಿ ನೀಡಿ ಪರಿಶೀಲಿಸಿ ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಹಾಸನ ಚನ್ನರಾಯಪಟ್ಟಣ ದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಸೆಂಟರ್ ಗೆ ಇಂದು
ಉಪ ಮುಖ್ಯ ಮಂತ್ತಿ ಅಶ್ವಥ್ ನಾರಾಯಣ ,ಜಿಲ್ಲೆ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ಭೇಟಿ ನೀಡಿ
ಕೋವಿಡ್ ರೋಗಿಗಳ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ.ಎನ್ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ
ಗೋಪಾಲಸ್ವಾಮಿ ,ಜಿಲ್ಲಾಧಿಕಾರಿ ಆರ್. ಗಿರೀಶ್, ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಹಾಗೂ
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ ಡಾ.ಸತೀಶ್ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.