ಯುವ ಪೀಳಿಗೆಗೆ ಶಾಸಕ ಹೆಚ್.ಪಿ. ಸ್ವರೂಪ್ ಕರೆ
ಹಾಸನ : ಸಾಮಾಜಿಕ ಕ್ರಾಂತಿಯ ನೇತಾರ ಪರಿವರ್ತನೆಯ ಹರಿಕಾರ ಡಿ. ದೇವರಾಜ್ ಅರಸುರವರ ಜೀವನ ಚರಿತ್ರೆ ಮತ್ತು ಅವರ ಆದರ್ಶವನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಅವರು ಕರೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಾನುವಾರದಂದು ಏರ್ಪಡಿಸಲಾಗಿದ್ದ ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ಕ್ರಾಂತಿಯ ನೇತಾರ ಪರಿವರ್ತನೆಯ ಹರಿಕಾರ ಡಿ. ದೇವರಾಜ್ ಅರಸುರವರು ಎರಡು ಭಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸಮಾಜದ ಎಲ್ಲಾ ವರ್ಗಗಳ ಏಳಿಗೆಗೆ ಶ್ರಮಿಸಿದ್ದಾರೆ ರಾಜಕೀಯ, ಸಾಮಾಜಿಕ, ಶೈಕ್ಷಣಿಕವಾಗಿ ನಾವೆಲ್ಲರೂ ಉತ್ತಮ ಜೀವನ ನಡೆಸಲು ಅವರ ಜೀವನವನ್ನೆ ಮುಡಿಪಾಗಿಟ್ಟಿದ್ದರು ಎಂದರು.
ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದ ಗೌರವ ಅರಸು ಅವರಿಗೆ ಸಲ್ಲುತ್ತದೆ, ಉಳುವವನೇ ಹೊಲದೊಡೆಯ ಕಾಯಿದೆಯನ್ನು ಇವರ ಅವಧಿಯಲ್ಲಿ ಜಾರಿಗೊಳಿಸಲಾಯಿತು. ಡಿ. ದೇವರಾಜ ಅರಸು ಅವರ ಜೀವನ ಚರಿತ್ರೆ, ವ್ಯಕ್ತಿತ್ವವನ್ನು ಇಂದಿನ ಪೀಳಿಗೆಯ ಮಕ್ಕಳು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, ದೇವರಾಜ್ ಅರಸು ಅವರು ಎಲ್ಲಾ ಸಮಾಜ ಏಳಿಗೆಗೆ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಶ್ರಮಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಹಿಂದುಳಿದ ವರ್ಗಗಳ, ದೀನ ದಲಿತ, ಬಡವರ ಉದ್ದಾರಕ್ಕೆ ಅನೇಕ ಯೋಜನೆಗಳನ್ನು ತಂದು ಈಗಲೂ ಸಹ ಅವರ ಹೆಜ್ಜೆ ಗುರುತು ಸಿಗುತ್ತದೆ ಎಂದರು. ಎಲ್ಲಾ ವರ್ಗಗಳ ಸಮಾನತೆಯಿಂದ ಕ್ರಾಂತಿಕಾರಿಯಾಗಿ ಸಾಮಾಜಿಕ, ರಾಜಕೀಯ ಬದಲಾವಣೆ ತರುತ್ತಾರೆ. ಮಹನೀಯರ ದೂರ ದೃಷ್ಟಿ ಇಂದಿನ ಪೀಳಿಗೆಯಲ್ಲಿ ಅಳವಡಿಸಿಕೊ ಳ್ಳಲಾಗಿದೆ. ಎಲ್ಲಾ ಸಮುದಾಯಗಳಲ್ಲಿ ಸಮಾನತೆ ಮೂಡಿಸುವುದು ಹಾಗೂ ಸಮಾನತೆಯಿಂದ ಕಾಣಬೇಕು ಆಗ ಮಾತ್ರ ಸಾರ್ಥವಾಗವಾಗುತ್ತದೆ ಎಂದು ತಿಳಿಸಿದರು. ನಿವೃತ್ತಿ ಶಿಕ್ಷಕರಾದ ಗುರುಮೂರ್ತಿಯವರು ಕಾರ್ಯಕ್ರಮದಲ್ಲಿ ವಿಶೇ? ಉಪನ್ಯಾಸದಲ್ಲಿ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿದ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದ ಕೀರ್ತಿ ಡಿ ದೇವರಾಜ್ ಅರಸು ಸಲ್ಲುತ್ತದೆ.
ಕಾರ್ಯಕ್ರಮದಲ್ಲಿ ಸುಧೀರ್ಘವಾಗಿ ದೇವರಾಜ್ ಅರಸು ಅವರ ಜೀವನ, ರಾಜಕೀಯ ಜೀವನ ವಿವರಿಸಿದರು. ಇದೆ ವೇಳೆ ರಾಜ್ಯ ಹಾಗೂ ರಾ? ಪ್ರಶಸ್ತಿ, ಡಿ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಬಿ.ಟಿ. ಮಾನವ ಹಾಗೂ ಬಿ.ಸಿ. ಶಂಕರಾಚಾರ್ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಇದಕ್ಕೆ ಮೊದಲು ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆ. ಕಾರ್ಯಕ್ರಮದ ಅಂಗವಾಗಿ ಅವರ ಭಾವಚಿತ್ರಕ್ಕೆ ಡಿಸಿ ಸಿ. ಸತ್ಯಭಾಮ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಆಕರ್ಷಕ ಸಾಂಸ್ಕೃತಿಕ ಕಲಾತಂಡ ಮತ್ತು ರಥಕ್ಕೆ ಚಾಲನೆ ನೀಡಿದರು.
ಇದೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿ?ಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತು ಅಧ್ಯಕ್ಷರಾದ ಹೆಚ್.ಎಲ್. ಮಲ್ಲೇಶ್ ಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಈ. ಕೃ?ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಹರೀಶ್, ಪೌರಾಯುಕ್ತರಾದ ಸತೀಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಲಕ್ಷ್ಮೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಚಂದ್ರಶೇಖರ್, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅದ್ಯಕ್ಷರಾದ ಪುಟ್ಟಸ್ವಾಮಿ ಶೆಟ್ಟರ್, ಸ್ವಾತಂತ್ರ್ಯ ಹೋರಾಟಗಾರಾದ ಹೆಚ್.ಎಂ. ಶಿವಣ್ಣ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.