ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

0

ಹಾಸನ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ www.kmdconline.karnataka.gov.in ನಲ್ಲಿ ಅರ್ಜಿ ಆಹ್ವಾನಿಸಿದ್ದು,

2023-24ನೇ ಸಾಲಿನ ಅರಿವು, ಶ್ರಮಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ (ಟ್ಯಾಕ್ಸಿ/ಗೂಡ್ಸ್ ವಾಹನ/ಪ್ಯಾಸೆಂಜರ್ ಆಟೋರಿಕ್ಷಾ ಖರೀದಿ) ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸದರಿ ಯೋಜನೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: 03-10-2023 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1 ನೇ ಮಹಡಿ, ಸಾಲಗಾಮೆ ಮುಖ್ಯ ರಸ್ತೆ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಶ್ರೀ, ವಿದ್ಯಾ ಗಣಪತಿ ದೇವಸ್ಥಾನ ಅಡ್ಡ ರಸ್ತೆ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ, ದೂರವಾಣಿ ಸಂಖ್ಯೆ:08172-246333 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here