ಹಾಸನ ಸೆ.22 : ಸರ್ಕಾರದ ಆದೇಶದನ್ವಯ ಸೆಪ್ಟೆಂಬರ್ 3 ರಂದು ಇಲಾಖೆಯ ಜಾನುವಾರು ಕ್ಷೇತ್ರಗಳಲ್ಲಿ ಅಮೃತಧಾರೆ ಯೋಜನೆ ಎಂಬ ನಾಮಕರಣದಲ್ಲಿ ಅಮೃತ್ ಮಹಲ್ ತಳಿ ಸಂವರ್ಧನಾ ಕೇಂದ್ರ, ಅಜ್ಜಂಪುರ ಇಲ್ಲಿನ ಅಮೃತಮಹಲ್ ತಳಿಯ ಹಿಂಡು ಇರುವ ಹಾಸನ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ಮತ್ತು ಹಾಸನ ತಾಲ್ಲೂಕುಗಳ ರೈತರಿಗೆ ಇಲಾಖೆ ನಿಗಧಿಪಡಿಸಿರುವ ಮಾರಾಟ ಬೆಲೆಯಂತೆ ಕೆಲವು ಷರತ್ತು ಮತ್ತು ನಿಬಂಧನೆಗಳೊಂದಿಗೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಅರಸೀಕೆರೆ, ಚನ್ನರಾಯಪಟ್ಟಣ ಮತ್ತು ಹಾಸನ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಇವರಿಂದ ನಿಗದಿತ ನಮೂನೆಯನ್ನು ಪಡೆದುಕೊಂಡು ಸೆ. 30 ರೊಳಗೆ ಅರ್ಜಿಯನ್ನು ಅರಸೀಕೆರೆ ಚನ್ನರಾಯಪಟ್ಟಣ ಮತ್ತು ಹಾಸನ ತಾಲ್ಲೂಕಿನ ಪಶುಆಸ್ಪತೆಯ ಮುಖ್ಯ ವೈದ್ಯಾಧಿಕಾರಿಗಳು(ಆಡಳಿತ) ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಅರಸೀಕೆರೆ, ಚನ್ನರಾಯಪಟ್ಟಣ ಮತ್ತು ಹಾಸನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಅವರನ್ನು ಸಂಪರ್ಕಿಸಬಹುದು. ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ ಅರಸೀಕೆರೆ(9449683484) ಚನ್ನರಾಯಪಟ್ಟಣ ( 9945464797) ಹಾಸನ ( 8861093486) ಇವರನ್ನು ಸಂಪರ್ಕಿಸಬಹುದಾಗಿದೆ.
ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ: ಅರ್ಜಿ ಆಹ್ವಾನ
ಹಾಸನ ಸೆ.22 ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 2021- 22 ನೇ ಸಾಲಿಗೆ ಪಶುಭಾಗ್ಯ ಫಲಾನುಭವಿ ಆಧಾರಿತ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ ಎಂದು ಅನುಷ್ಠಾನಗೊಳಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಸಾಮಾನ್ಯ ವರ್ಗದ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಗೆ ಸರ್ಕಾರದ ಸಹಾಯಧನದೊಂದಿಗೆ ( ಘಟಕದ ವೆಚ್ಚ 62000 ರೂ/ ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇಕಡ 33.3 ರಷ್ಟು ಸಹಾಯಧನ ಮತ್ತು ಸಾಮಾನ್ಯ ವರ್ಗಕ್ಕೆ ಶೇಕಡ ಶೇ. 25 ರಷ್ಟು ಸಹಾಯಧನ) ಹಾಲು ಕರೆಯುವ ಒಂದು ಮಿಶ್ರತಳಿ ಹಸು (ಹೆಚ್.ಎಫ್/ಜರ್ಸಿ) ಎಮ್ಮೆಯನ್ನು ಷರತ್ತು ಮತ್ತು ನಿಬಂಧನೆಗಳೊಂದಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕೂಲಿ ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರು ಫಲಾನುಭವಿ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡುವುದಕ್ಕೆ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶು ಆಸ್ಪತ್ರೆ ಇವರಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಅಕ್ಟೋಬರ್ 7 ರೊಳಗೆ ಅರ್ಜಿಯನ್ನು ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಆಡಳಿತ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ರವರನ್ನು ಖುದ್ದಾಗಿ ಅಥವಾ ದೂರವಾಣಿ ಮುಖಾಂತರ ಸಂಪರ್ಕಿಸಬಹುದು. ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ ಆಲೂರು (9611775929), ಅರಕಲಗೂಡು (7353886607), ಅರಸೀಕೆರೆ (9449683484) ಬೇಲೂರು ( 9731121184), ಚನ್ನರಾಯಪಟ್ಟಣ (9945464797), ಹಾಸನ(8861093486) ಹೊಳೆನರಸೀಪುರ (9448655508), ಸಕಲೇಶಪುರ(9448202180) ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
#farmersnewshassan #ರೈತಮಿತ್ರ_ಹಾಸನ್_ನ್ಯೂಸ್ #farmers #hassan #hassannews