ಹಾಸನ, ನ.: ಶಾಸಕರಾದ ಸಿ. ಎನ್ ಬಾಲಕೃಷ್ಣ, ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಪಾರ ಮಳೆಯಿಂದ ಹಾನಿಗೊಳಗಾಗಿರುವ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು, ಬೀರೂರು, ಬ್ಯಾಡರಹಳ್ಳಿ ಗ್ರಾಮಗಳಿಗೆ ಇಂದು ಭೇಟಿ ನೀಡಿ ಬೆಳೆ ಹಾನಿಯಾಗಿರುವುದನ್ನು ಪರಿಶೀಲಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ರವಿ, ತಹಸೀಲ್ದಾರ್ ಮಾರುತಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಭಾನುಪ್ರಕಾಶ್ ಮತ್ತಿತರರು ಹಾಜರಿದ್ದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮಾರಾಟಕ್ಕೆ ರೈತರ ನೊಂದಣಿ
ಹಾಸನ, ನ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮಾರಾಟ ಮಾಡಲು ಇಚ್ಚಿಸುವ ರೈತರಿಂದ ನೋಂದಣಿ ಕಾರ್ಯವನ್ನು ಸರ್ಕಾರದ ಮಾರ್ಗಸೂಚಿಯಂತೆ ಪ್ರಾರಂಭಿಸಲು ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಮ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ರೈತರ ನೊಂದಣಿ ಪ್ರಕ್ರಿಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯದ ರೈತರಿಂದ 3.35 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಖರೀದಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳಿ ಖರೀದಿ ಏಜೆನ್ಸಿಗಳಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ದೇವರಾಜ್, ಆರ್ ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್, ಆರ್ . ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರಾದ ಶಿವು, ಎಂ.ಸಿ. ಇನ್ನಿತರರು ಹಾಜರಿದ್ದರು.