ಬೀಜ, ರಸಗೊಬ್ಬರ, ಯಂತ್ರೋಪಕರಣ
ಸಕಾಲದಲ್ಲಿ ಸಿಗಲಿ: ಶಾಸಕ ಪ್ರೀತಮ್ ಗೌಡ

0

ಬೀಜ, ರಸಗೊಬ್ಬರ, ಯಂತ್ರೋಪಕರಣ
ಸಕಾಲದಲ್ಲಿ ಸಿಗಲಿ: ಶಾಸಕ ಪ್ರೀತಮ್ ಗೌಡ
ಹಾಸನ: ಕೃಷಿಗೆ ಅವಶ್ಯಕ ಪರಿಕರಗಳಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಹಾಗೂ ಇತರೆ ಕೃಷಿ ಯಂತ್ರೋಪಕರಣಗಳು ರೈತರಿಗೆ ಸಕಾಲದಲ್ಲಿ ದೊರಕಬೇಕು ಕ್ಷೇತ್ರದ ಶಾಸಕ ಪ್ರೀತಮ್ ಜೆ.ಗೌಡ ತಿಳಿಸಿದರು.
ನಗರದ ಸಂತೆಪೇಟೆ ವೃತ್ತ, ನಗರಸಭೆ ಎದುರು ಇರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕೃಷಿ ಮಾಹಿತಿ ರಥಕ್ಕೆ ಚಾಲನೆ ನೀಡಿ, ಕೃಷಿಗೆ ಸಂಬAಧಿಸಿದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ರೈತರ ಕೃಷಿಗೆ ಅವಶ್ಯಕವಾಗಿ ಬೇಕಾದ ಎಲ್ಲವನ್ನು ನೀಡುವ ನಿಟ್ಟಿನಲ್ಲಿ ಸರಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಆತಂಕ ಪಡುವುದು ಬೇಡ. ಕೃಷಿ ಮತ್ತು

ಇತರೆ ಸಂಬಧಿತ ಇಲಾಖೆಗಳ ಪ್ರಮುಖ ಯೋಜನೆಗಳನ್ನು ರೈತರ ಏಳಿಗೆಗಾಗಿ ಅನುಷ್ಠಾನ ಮಾಡಲಾಗುತ್ತಿದೆ. ರೈತರು ದೇಶದ ಬೆನ್ನೆಲುಬು ಎಂದು ಎಲ್ಲರೂ ಹೇಳುತ್ತಾರೆ. ಆದರೆ ನಿಜವಾಗಿ ದಶಕಗಳೇ ಕಳೆದರೂ ರೈತರು ಇನ್ನೂ ಸ್ವಾವಲಂಬಿಯಾಗಿ ಬದುಕಲು ಕಷ್ಟ ಪಡುವಂತಹ ಪರಿಸ್ಥಿತಿ ಇದೆ. ಇದನ್ನು ಮನಗಂಡಿರುವ ಬಿಜೆಪಿ ಸರಕಾರ ರೈತರ ಕ್ಷೇಮಾಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.
ಕೇಂದ್ರ ಸರಕಾರ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸಗೊಬ್ಬರ, ಔಷಧಿ ಹಾಗೂ ಯಂತ್ರೋಪಕರಣಗಳನ್ನು ಸಬ್ಸಿಡಿ ದರದಲ್ಲಿ ನೀಡುವ ಜೊತೆಗೆ ಅವರಿಗೆ ಕೃಷಿ ಬಗ್ಗೆ ಅಗತ್ಯ ಮಾಹಿತಿ ನೀಡಿ ಅವರನ್ನು ಮೇಲೆತ್ತುವ ಕೆಲಸ ಮಾಡಲಾಗುತ್ತಿದೆ. ಕಳೆದ 10 ವರ್ಷಗಳ ಹಿಂದೆ ರಸಗೊಬ್ಬರಕ್ಕೆ ಕ್ಯೂ ನಿಲ್ಲುವ ಪರಿಸ್ಥಿತಿ ಇತ್ತು. ಆದರೆ ಇದೀಗ ರೈತರ ಮನೆಗೆ ಗೊಬ್ಬರ ನೀಡುವ ಕೆಲಸ ಸರಕಾರ ಮಾಡುತ್ತಿದೆ. ಪ್ರಾಮಾಣಿಕವಾಗಿ ಪ್ರತಿ ರೈತರ ಮನೆ ಬಾಗಿಲಿಗೆ ಹೋಗಿ ಅವರಿಗೆ ಕೃಷಿಗೆ ಅಗತ್ಯ ಮಾಹಿತಿ ನೀಡುವ ಅಭಿಯಾನ ಮಾಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು
ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಹೆಚ್.ರವಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಮಾಹಿತಿ ಅಭಿಯಾನ ಪ್ರತಿ ಮನೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಅವರಿಗೆ ಕೃಷಿಯಲ್ಲಿ ಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಉತ್ಪಾದನೆ ಮಾಡಲು ಅಗತ್ಯವಿರುವ ಮಾಹಿತಿ ನೀಡುವ ಕೆಲಸಕ್ಕೆ ಸರಕಾರ ಮುಂದಾಗಿದೆ ಎಂದರು. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕೃಷಿ ಇಲಾಖೆಗೆ ಹೆಚ್ಚಿನ ಅನುದಾನ ಬಂದಿವೆ. ಸುಮಾರು 52 ಸಾವಿರ ಮೈಕ್ರೋ ಇರಿಗೇಷನ್, 15 ಸಾವಿರ ಟಾರ್ಪಲ್ ಸೇರಿದಂತೆ ಅನೇಕ ಹೆಚ್ಚಿನ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಒದಗಿಸಲಾಗಿದೆ. ಅಲ್ಲದೆ ರಸಗೊಬ್ಬರ ಯಂತ್ರೋಪಕರಣ ವಿತರಣೆಯಲ್ಲಿ ಹೆಚ್ಚಿನ ಸಾಧನೆ ಮಾಡಲಾಗಿದೆ ಎಂದು ಹೇಳಿದರು.
ಸೂಕ್ಷ÷್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಗಳಡಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿಯೂ ಸಹ ಹೆಚ್ಚಿನ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ರೈತರ ಬೆಳೆ ಸಮೀಕ್ಷೆ ತಂತ್ರಾAಶ ಬಳಕೆ, ಬೆಳೆ ವಿಮೆ, ಪ್ರೂಟ್ಸ್ ತಂತ್ರಾAಶದಲ್ಲಿ ಪಹಣಿ ಜೋಡಣೆ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡುವ ಮೂಲಕ ಸಹಕರಿಸಬೇಕಾಗಿ ಕೋರಿದರು.
ಈ ಸಂದರ್ಭದಲ್ಲಿ ಉಪ ಕೃಷಿ ನಿರ್ದೇಶಕರಾದ ಯು.ಎಚ್.ಭಾನುಪ್ರಕಾಶ್, ಸುಷ್ಮಾ, ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಆರ್.ಅಜಯ್ ಕುಮಾರ್, ಕೃಷಿ ಸಹ ಇಲಾಖೆಗಳ ತಾಲೂಕು ನಿರ್ದೇಶಕರು, ಕೃಷಿ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು ಹಾಗೂ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here