#ರೈತಮಿತ್ರ_ಹಾಸನ್_ನ್ಯೂಸ್ : ಹಾಸನ : (ಹಾಸನ್_ನ್ಯೂಸ್) ಅ4 :
•ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಆದೇಶದಂತೆ ನಗರ ಸಭಾ ವ್ಯಾಪ್ತಿಯಲ್ಲಿ ಹೈನುಗಾರಿಕೆ ತಾಣಗಳು & ಗೋಶಾಲೆಗಳ ನೊಂದಣಿ ಕಾರ್ಯವನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕಾಗಿರುತ್ತದೆ.

10ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರಂಗಳು ಹಾಗೂ ಗೋಶಾಲೆಗಳನ್ನು ಸ್ಥಾಪಿಸಲು ಹಾಗೂ ಕಾರ್ಯ ನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಲ ಕಾಯ್ದೆ 1974 ಹಾಗೂ ವಾಯು(ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ 1981ರ ಅಡಿಯಲ್ಲಿ ಒಪ್ಪಿಗೆಯನ್ನು ಪಡೆಯಬೇಕಾಗಿರುತ್ತದೆ.

ಹಾಸನ ನಗರ ಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳು ಹಾಸನ ನಗರ ಸಭೆಯಲ್ಲಿ ಆನ್‍ಲೈನ್ ಅಥವಾ ಆಫ್‍ಲೈನ್ Itstaff-ulb-hassan@yahoo.com ನಲ್ಲಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.

ಎಲ್ಲಾ ಡೈರಿ ಫಾರಂಗಳು ಹಾಗೂ ಗೋಶಾಲೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಗ ಸೂಚಿಗಳ ರಿತ್ಯಾ ಕಾರ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.
ನೊಂದಣಿ ಕಾರ್ಯವನ್ನು 15 ದಿನದೊಳಗೆ ಕಡ್ಡಾಯವಾಗಿ ನೊಂದಾಯಿಸಿಕೊಳ್ಳುವಂತೆ ನಗರ ಸಭೆ ಪೌರಾಯುಕ್ತರು ತಿಳಿಸಿದ್ದಾರೆ.

#farmersnewshassan #farmers #hassan