ಹಾಸನ ಜ.21 (ಹಾಸನ್_ನ್ಯೂಸ್ !, ಹಾಸನ ವಿಭಾಗ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಒಂಟಿ ಸಲಗ ಕಾಲರ್ ಅಳವಡಿಸುವ ಹಾಗೂ ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆಯನ್ನು ಜ.20 ರಿಂದ ಜ.27 ರವರೆಗೆ ಹಮ್ಮಿಕೊಳ್ಳಲಾಗಿದೆ.
ಮತ್ತಿಗೋಡು ಅನೆ ಕ್ಯಾಂಪ್‍ನಿಂದ ಅಭಿಮನ್ಯು ಸೇರಿದಂತೆ ಮೂರು ಅನೆಗಳನ್ನು ಕಾರ್ಯಾಚರಣೆಗೆ ಬಳಲಾಗುತ್ತಿದೆ ಅಲ್ಲದೆ ಇದಕ್ಕಾಗಿ ಮೂವತ್ತು ಅನೆಗಳನ್ನು ಅಣಿಗೊಳಿಸಲಾಗಿದೆ ಹಾಗೂ ಕಾರ್ಯಾಚರಣೆಯ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳಲ್ಲಿ ರೈತರು ಮತ್ತು ಸಾರ್ವಜನಿಕರು ಸದರಿ ಕಾರ್ಯಾಚರಣೆಗೆ ಸಹಕರಿಸಬೇಕೆಂದು ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಡಾ. ಬಸವರಾಜ. ಕೆ. ಎನ್ ಅವರು ತಿಳಿಸಿದ್ದಾರೆ.
ಹಾಸನ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಕಾಡಾನೆಗಳು ನಾಡಿಗೆ ಬಂದು ಸಾರ್ವಜನಿಕರಿಗೆ ಹಾನಿ ಮಾಡುತ್ತಿರುವ ರೈತರಿಗೆ ತೊಂದರೆ ನೀಡುತ್ತಿರುವ ಕೆಲವು ಪುಂಡಾನೆಗಳನ್ನು ಆಯ್ಕೆ ಮಾಡಿ ಅವುಗಳ ಚಲನ-ವಲನಗಳನ್ನು ಕಂಡುಹಿಡಿದು ಹಾನಿ ಮಾಡುವುದನ್ನು ತಡೆಗಟ್ಟಲು
ಅನುಕೂಲವಾಗುವಂತೆ ವಿಭಾಗ ವ್ಯಾಪ್ತಿಯಲ್ಲಿ ಒಂಟಿ ಸಲಗವನ್ನು ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬೇರೆಡೆಗೆ ಸ್ಥಳಾಂತರಿಸಲು ಹಾಗೂ ವಿಭಾಗ ವ್ಯಾಪ್ತಿಯಲ್ಲಿ ಈ ಹಿಂದೆ ರೇಡಿಯೋ ಕಾಲರ್ ಅಳವಡಿಸಿದ್ದ ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್‍ಗಳನ್ನು ಮರು ಅಳವಡಿಸಿ
ನಂತರ ಸೆರೆಹಿಡಿದ ಸ್ಥಳದಲ್ಲಿಯೇ ಬಿಡಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದು ಕಾರ್ಯಚರಣೆ ಕೈಗೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.