FORREST NEWS HASSAN

ಕಾಡುಮನೆ ಸಮೀಪ ಮಣಿಬಗ್ತಿ ಅರಣ್ಯ ಭಾಗದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ಒಂದು ಬಲಿ ಮೂವರಿಗೆ ಹೆಚ್ಚುವರಿ ಚಿಕಿತ್ಸೆ

By Hassan News

February 18, 2023

ಸಕಲೇಶಪುರ: ಕಾಡ್ಗಿಚ್ಚು ನಂದಿಸಲು ತೆರಳಿದ್ದ ಅರಣ್ಯ ರಕ್ಷಕ ಸುಂದರೇಶ್ ಚಿಕಿತ್ಸೆಗೆ ಸ್ಪಂದಿಸದೆ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ., ತಾಲೂಕಿನ ಕಾಡುಮನೆ ಸಮೀಪ ಮಣಿಬಗ್ತಿ ಅರಣ್ಯ ಭಾಗದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ನಂದಿಸಲು ಗುರುವಾರ ಆರು ಜನ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ಬೆಂಕಿ ನಂದಿಸುವ ವೇಳೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹಾಸನಕ್ಕೆ‌ ರವಾನಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸುಂದರೇಶ್, ಮಂಜುನಾಥ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ

ಸುಂದರೇಶ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.,

ಫೆಬ್ರುವರಿ 16 ರ ಗುರುವಾರ ಮದ್ಯಾಹ್ನ  ಕಾಡುಮನೆ ಎಸ್ಟೇಟ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಕಾಳ್ಗಿಚ್ಚು , ಕಾಳ್ಗಿಚ್ಚು ಆರಿಸಲು ಡಿಆರ್ ಎಫ್ ಓ ಮಂಜುನಾಥ ನೇತೃತ್ವದಲ್ಲಿ ತೆರಳಿದ್ದ ಆರು ಜನ ಅರಣ್ಯ ಇಲಾಖೆ ಸಿಬ್ಬಂದಿ , ವೇಗವಾಗಿ ವ್ಯಾಪಿಸಿ ದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರೆದಿತ್ತು , ಬೆಂಕಿ ಗೆ ಸಿಲಿಕಿ ಡಿಆರ್ ಎಫ್ ಓ ಮಂಜುನಾಥ, ಫಾರೆಸ್ಟ್ ಗಾರ್ಡ್ ಸುಂದರೇಶ್ ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್ ಗೆ ಗಾಯ , ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದ ಸುಂದರೇಶ್ ಹಾಗು

ಮಂಜುನಾಥ , ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗು ಸ್ಥಳೀಯರು , ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು , ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರೊ ಇಬ್ಬರಲ್ಲಿ ರಾತ್ರಿ ಸುಂದರೇಶ್ ಸಾವು ,

ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿದ್ಸ ಸಿಬ್ಬಂದಿ , ಫಲಿಸದ ಸಾವಿರಾರು ಜನರ ಪ್ರಾರ್ಥನೆ , ಶೇಕಡಾ 80 ರಷ್ಟು ಸುಟ್ಟಗಾಯಳಾಗಿದ್ದ ಸುಂದರೇಶ್ ಸಾವು , ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿರೊ ಸುಂದರೇಶ್ ಅಂತ್ಯಕ್ರಿಯೆ , ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್

ಹಾಸನದಲ್ಲಿ ಅರಣ್ಯ ಇಲಾಖೆ ವತಿಯಿಂದ ಗೌರವಾರ್ಪಣೆ ಬಳಿಕ ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಸಾಧ್ಯತೆ