ಹಾಸನ, ಸಕಲೇಶಪುರ, ಬೇಲೂರು, ಆಲೂರು, ಅರಕಲಗೂಡಿನ ಕಾಡಾನೆ ಸ್ಥಳಾಂತರಕ್ಕೆ 300 ಕೋಟಿ ಮೀಸಲಿಡಲು ಮನವಿ

0

ಬೆಂಗಳೂರು : ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು, ಅರಕಲಗೂಡು ಸೇರಿದಂತೆ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಪರೀತವಾಗಿರುವ ಉಪಟಳ, ನಿಯಂತ್ರಣಕ್ಕೆ 2022-23ನೇ ಸಾಲಿನ ಬಜೆಟ್‌ನಲ್ಲಿ 300 ಕೋಟಿ ರೂ.ಗಳ ಅನುದಾನ ಮೀಸಲಿರಿಸಬೇಕೆಂದು ಸಕಲೇಶಪುರ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್, ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಕಳೆದ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಕಾಡಾನೆಗಳ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು ಜೀವ ಹಾನಿ, ಬೆಳೆ ಹಾನಿ ವ್ಯಾಪಕವಾಗಿದೆ. ರೈತರು, ಕೂಲಿ ಕಾರ್ಮಿಕರು, ಜನ ಸಾಮಾನ್ಯರು ಭಯದ ವಾತಾವರಣದಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಸಮಸ್ಯೆಯನ್ನು ವಿವರಿಸಿದರು.

ಶಾಶ್ವತ ಪರಿಹಾರ ಕಂಡುಕೊಳ್ಳಲು ಕಾಡಂಚಿಗೆ ಸುಮಾರು 250KM ಗೂ ಹೆಚ್ಚು ಸೋಲಾರ್ ಹ್ಯಾಂಗಿಗ್ ಫೆನ್ಸಿಂಗ್, ರೈಲ್ವೆ ಹಳಿಗಳ ಬೇಲಿ ಹಾಗೂ ಕಾಡಾನೆಗಳ ಸ್ಥಳಾಂತರಕ್ಕಾಗಿ 2022-23ನೇ ಸಾಲಿನ ಬಜೆಟ್ ನಲ್ಲಿ 300 ಕೋಟಿ ರೂ.ಅನುದಾನ ಮೀಸಲಿರಸಬೇಕೆಂದು ವಿನಂತಿ ಮಾಡಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಸಕಲೇಶಪುರದ HM ವಿಶ್ವನಾಥ್  ಮೊದಲಾದವರಿದ್ದರು.

hassanforrestnews

LEAVE A REPLY

Please enter your comment!
Please enter your name here