ಗಾಂಧೀಜಿ, ಶಾಸ್ತ್ರೀಜಿಯವರ ಆದರ್ಶಗಳು ಅನುಕರಣೀಯ: ಜಿಲ್ಲಾಧಿಕಾರಿ ಆರ್. ಗಿರೀಶ್

0

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ, ಹಾಸನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾ ಅಧಿಕಾರಿ ಬಿ.ಎ. ಪರಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಜ್ಯೋತಿ ಅಪ್ಪಣ್ಣ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಎನ್ ನಂದಿನಿ, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ಸ್ವತಂತ್ರ್ಯ ಹೋರಾಟಗಾರರಾದ ಹೆಚ್. ಎಂ. ಶಿವಣ್ಣ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ ಮತ್ತಿತರರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಗಾಂಧೀಜಿಯವರ ಚಿಂತನೆ ಮತ್ತು ಆದರ್ಶಗಳು ಸದಾ ಅನುಕರಣೀಯ. ಅವರು ಶಾಂತಿ ಹಾಗೂ ಅಹಿಂಸಾ ಹೋರಾಟ ಹೋರಾಟದ ಮೂಲಕ ಜಗತ್ತಿಗೆ ಮಾದರಿಯಾಗಿದ್ದಾರೆ ಎಂದು ಅವರು ತಿಳಿಸಿದರು.

ಗಾಂಧೀಜಿಯವರ ಜೀವನ ಮೌಲ್ಯಗಳು ವಿಶ್ವಮಾನ್ಯವಾಗಿದೆ. ಶ್ರದ್ದೆ ಹಾಗೂ ತಾಳ್ಮೆಯಿಂದ ಮಾತ್ರ ಪ್ರತಿಯೊಂದು ಕೆಲಸದಲ್ಲೂ ಜಯವನ್ನು ಗಳಿಸಲು ಸಾಧ್ಯ. ಬಾಪೂಜಿಯವರ ಮಾರ್ಗವನ್ನು ಎಲ್ಲರೂ ಪಾಲಿಸಿದರೆ ಸಮಾಜದಲ್ಲಿ ಶಾಂತಿ ಹಾಗೂ ಅಭಿವೃದ್ಧಿಗಾಗಿ ಸಾಧ್ಯ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಹೇಳಿದರು.

ದಕ್ಷಿಣ ಆಫ್ರಿಕಾದಲ್ಲಿ ಜನಾಂಗೀಯ ಹಾಗೂ ನಾಗರೀಕ ಹಕ್ಕುಗಳ ಉಲ್ಲಂಘನೆ ವಿರುದ್ಧ ಹೋರಾಟ ಪ್ರಾರಂಭ ಮಾಡಿದ ಮಹಾತ್ಮ ಗಾಂಧೀಜಿ ನಂತರ ಭಾರತಕ್ಕೆ ಬಂದು ದೇಶದಲ್ಲಿನ ಅಸ್ಪೃಶ್ಯತೆ ಹಾಗೂ ಬ್ರಿಟೀಷರ ಆಡಳಿತದ ವಿರುದ್ಧ ಹಲವು ಸ್ವರೂಪದ ಚಳುವಳಿ ನಡೆಸಿದರು.ಅವರು ಅನುಸರಿಸಿದ ಶಾಂತಿ ಹಾಗೂ ಅಹಿಸಾತ್ಮಕ ಮಾರ್ಗದ ಹೋರಟ ಜಗತ್ತಿನ ಕಣ್ಣು ತರೆಸಿತು. ಇದು ವಿಶ್ವ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ಅವರು ಹೇಳಿದರು.

ದೇಶದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರೂ ಸಹ ಅತ್ಯಂತ ಸರಳ, ಪ್ರಾಮಾಣಿಕ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. 1965ರಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಟದಲ್ಲಿ ಭಾರತಕ್ಕೆ ಗೆಲುವನ್ನು ತಂದು ಕೊಡುವುದರ ಜೊತೆಗೆ ಜೈ ಜವಾನ್ ಜೈ ಕಿಸಾನ್ ಎಂಬ ಧ್ಯೇಯ ವಾಕ್ಯವನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸ್ಮರಿಸಿದರು.

ಸ್ವಾತಂತ್ರ್ಯ ಹೋರಾಟಗಾರರಾದ ಶಿವಣ್ಣ ಅವರು ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಈ ಇಬ್ಬರೂ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಬೇಕು. ಅನಾಚಾರದ ಹಿಂದೆ ಹೋಗದೆ, ಸತ್ಯ ಹಾಗೂ ಶಾಂತಿ, ಸೌಹಾರ್ದತೆಯಿಂದ ಪ್ರತಿಯೊಬ್ಬರೂ ಜೀವಿಸಬೇಕು ಎಂದು ಅವರು ಹೇಳಿದರು.

ಮಹಾತ್ಮ ಗಾಂಧೀಜಿಯವರ ಜೀವನವೇ ಎಲ್ಲರಿಗೂ ದೊಡ್ಡ ಸಂದೇಶ ಬಾಪೂ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ, ಚಿಂತನೆ ಬಹಳ ಶ್ರೇಷ್ಠ ವಾದವು ಎಂದು ಶಿವಣ್ಣ ಅವರು ಹೇಳಿದರು.

ಉಪ ವಿಭಾಗಾಧಿಕಾರಿ ನವೀನ್ ಭಟ್ ಅವರು ಮಾತನಾಡಿ ಮಾಹಾತ್ಮ ಗಾಂಧೀಜಿ ಸತ್ಯ, ಅಹಿಂಸೆ, ಸತ್ಯಾಗ್ರಹಗಳ ಮಹತ್ವವನ್ನು ವಿಶ್ವಕ್ಕೆ ತೋರಿಸಿದ ವಿಶ್ವ ಚೇತನ. ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತ್ರಿ ಕೂಡಾ ಮಹಾನ್ ಚಿಂತಕ, ಧಕ್ಷ ಆಡಳಿತಗಾರರಾಗಿದ್ದರು ಎಂದರು.

ಪ್ರತಿಯೊಬ್ಬರೂ ಈ ಮಹಾನಾಯಕರಂತೆ ಸಮಾಜದ ಒಳಿತಿಗಾಗಿ ಉತ್ತಮ ಸೇವೆ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಡಾ|| ನವೀನ್ ಭಟ್ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಸುದರ್ಶನ್ ಅವರು ಮಾತನಾಡಿ ಮಾಹಾನ್ ವ್ಯಕ್ತಿಗಳ ಮೂರ್ತಿ ಪೂಜೆ ಬದಲು ಅವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾ ಅಧಿಕಾರಿ ಬಿ.ಎ. ಪರಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಜ್ಯೋತಿ ಅಪ್ಪಣ್ಣ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಎನ್ ನಂದಿನಿ, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ತಹಶೀಲ್ದಾರ್ ಶಿವಶಂಕರಪ್ಪ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂಧಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here