ಈ ಬಾರಿಯ ಗಣೇಶೋತ್ಸವಕ್ಕೆ ಸರ್ಕಾರದ ಮಾರ್ಗಸೂಚಿ

0

ಸರಳ ಶ್ರೀ ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿ

1) ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ / ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು.

2) ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು, ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

3) ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು / ಮಂಡಳಿಗಳು ಗಣೇಶ ಮೂರ್ತಿಯನ್ನು ಪುತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ / ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು, ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು, ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ.

4) ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20 ಕ್ಕಿಂತ

ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು. 5) ಶ್ರೀ ಗಣೇಶ ಆಚರಣೆಯ ಆಯೋಜಕರು ಕೋವಿಡ್-19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ

ಬಗ್ಗೆ ಪುಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ.

6) ಶ್ರೀ ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.

7) ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರೀ ಗಣೇಶ ಪ್ರತಿಷ್ಠಾಪನೆ ಮಾಡಬೇಕು.

8) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ / ಸಂಗೀತ / ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

9) ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವಣಿಗೆಯನ್ನು ಹೊರಡಿಸನ್ಮದಲ್ಲ / ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

10) ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ / ಖಾಸಗಿ ಬಯಲು ಪುದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ / ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು.

11) ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ / ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಪ್ಯಾನಿಟೈಸರ್ ಹಾಗೂ ಥರ್ಮಲ್ ಟ್ರೈನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು.

12) ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

13) ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

14) ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್, ಇತರೆ ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

15) ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ / ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

16) ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

17) ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ / ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ / ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here