ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಒಟ್ಟು ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ‘Karnataka Institute of Technology'(KIT) ಗಳಾಗಿ ಉನ್ನತೀಕರಿಸಲು ನಿರ್ಧರಿಸಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ: 05.05.2022ರಂದು ಉನ್ನತ ಶಿಕ್ಷಣಕ ಸಂಬಂಧಪಟ್ಟಂತೆ ಆಯೋಜಿಸಿದ್ದ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ 07 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಕೆ.ಐ.ಟಿ) ಆಗಿ ಮೇಲ್ಮರ್ಜೆಗೇರಿಸುವ ಯೋಜನೆಗೆ ಶೀಘ್ರವಾಗಿ ಕಾರ್ಯಪಡೆಯನ್ನು ರಚಿಸುವಂತೆ ಸೂಚಿಸಿದ್ದು, ಅದರಂತೆ,
ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಉದ್ದೇಶಿತ ಶೈಕ್ಷಣಿಕ ತಜ್ಞರ ಕಾರ್ಯಪಡೆಯನ್ನು ರಚನೆಯ ವಿವರಗಳನ್ನು ಸಲ್ಲಿಸಿರುತ್ತಾರೆ.
2022-23ನೇ ಸಾಲಿನ ಆಯ-ವ್ಯಯ ಭಾಷಣದಲ್ಲಿನ ಘೋಷಣೆಯಂತ ಮೊದಲ ಹಂತವಾಗಿ ರಾಜ್ಯದಲ್ಲಿನ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು “Karnataka Institute of Technology” ಗಳನ್ನಾಗಿ ಉನ್ನತೀಕರಿಸಲು ಹಾಗೂ ಉನ್ನತೀಕರಿಸಿ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವ ಯೋಜನೆಗೆ ವಿವರವಾದ ಕಾರ್ಯವರದಿಯನ್ನು (DPR) ಸಲ್ಲಿಸುವ ಉದ್ದೇಶಕ್ಕಾಗಿ ಶೈಕ್ಷಣಿಕ ತಜ್ಞರ ಕಾರ್ಯಪಡೆಯನ್ನು ರಚಿಸಲು ಸರ್ಕಾರವು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ.