ಹೊಳೆನರಸೀಪುರ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ITI) ಅವರು ಟಾಟಾ ಟೆಕ್ನಾಲಜೀಸ್ ಸಹಭಾಗಿತ್ವದಲ್ಲಿ ಅಡ್ವಾನ್ಸ್ಡ್ ಸಿಎನ್ಸಿ ಮಷಿನಿಂಗ್ (2 ವರ್ಷ),

ಇಂಡಸ್ಟ್ರಿಯಲ್ ರೋಬೋಟಿಕ್ಸ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನೀಷಿಯನ್ (1 ವರ್ಷ)

ಎರಡು ಹೊಸ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದ್ದಾರೆ. ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಮತ್ತು ಸೂಕ್ತ ದಾಖಲೆಗಳನ್ನು ಸಲ್ಲಿಸಿ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ರೀತಿಯಲ್ಲಿ ಅವಕಾಶ ನೀಡಲಾಗುವುದು ಎಂದು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದು. 9964934238