ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ,ಹಾಸನ ಪ್ರಕಟಣೆ
ದಿನಾಂಕ 19.03.2022 ರಂದು (ಶನಿವಾರ) ಹಾಸನದಲ್ಲಿ ಮಿನಿ ಉದ್ಯೋಗ ಮೇಳ
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಇವರ ವತಿಯಿಂದ ಅಜಾದ್ ಅಮೃತ್ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ದಿನಾಂಕ 19.03.2022 ರಂದು ‘ಮಿನಿ ಉದ್ಯೋಗ ಮೇಳ” ಆಯೋಜಿಸಲಾಗಿದ್ದು, ಬೆಂಗಳೂರು ಮತ್ತು ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಯಾವುದೇಪದವಿ/ ಡಿಪ್ಲೊಮ್/ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್,ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಮತ್ತು ಬಯೊಡೆಟಾ(Resume) ಪ್ರತಿಗಳೊಂದಿಗೆ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ:08172-296374, 8660141863, 8722606874, 9900849750 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಲಾಗಿದೆ.
ಸ್ಥಳ:ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸರ್ಕಾರಿ ಐ.ಟಿ.ಐ ಕಾಲೇಜು ಆವರಣ , ಬಿ.ಎಂ.ರಸ್ತೆ , ಹಾಸನ
CB Maniwath ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಉದ್ಯೋಗ ಅಧಿಕಾರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ.. ಹಾಸನ-573 201