ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ  ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ , ಅರ್ಜಿ ಆಹ್ವಾನಿಸಲಾಗಿದೆ.

0

ವಿಕಲಚೇತನರ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಹಾಸನ.ಅ.24(ಹಾಸನ್_ನ್ಯೂಸ್) ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ  ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಹಾಸನ ಇಲ್ಲಿಗೆ ನವೆಂಬರ್ 18 ರೊಳಗೆ ದ್ವಿಪ್ರತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, 9ನೇ ಕ್ರಾಸ್, ಶಂಕರಮಠ ರಸ್ತೆ, ಕೆ.ಆರ್. ಪುರಂ, ಹಾಸನ ದೂರವಾಣಿ ಸಂಖ್ಯೆ: 08172-264546, 295546ಗೆ ಸಂಪರ್ಕಿಸಬಹುದಾಗಿದೆ – ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ

LEAVE A REPLY

Please enter your comment!
Please enter your name here