ನಿನ್ನೆ ರಾತ್ರಿ ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ನಡೆದಿದೆ

0

ಹಾಸನ / ಸಕಲೇಶಪುರ : ನಿನ್ನೆ ರಾತ್ರಿ ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಸಕಲೇಶಪುರದಲ್ಲಿ ನಡೆದಿದೆ.

ಯಡೆಹಳ್ಳಿ ಗ್ರಾಮದ ಸಾರ್ವಜನಿಕ ಗಣೇಶೋತ್ಸವದ ಮೂರ್ತಿ ವಿಸರ್ಜನೆ ನಿನ್ನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಎಲ್ಲರ ಜೊತೆಗೆ ವಿಸರ್ಜನೆ ಕಾರ್ಯದಲ್ಲಿ ತೊಡಗಿಕೊಂಡಿದ್ದ ವೈ. ಬಿ ಯತೀಶ್ ರವರು ಗೊದ್ದನಕೆರೆ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ. ಈಜು ಬರುತ್ತಿದ್ದರೂ ಅವರಿಗೆ ಆ ಸಂದರ್ಭದಲ್ಲಿ ವಿಧಿಯೇ ಕೈ ಕೊಟ್ಟು ಅವರನ್ನು ಮೃತ್ಯುವಿಗಿಡಾಗಿಸಿದೆ.

ಬಾಗೆ ಗ್ರಾಮ ಪಂಚಾಯತ್ ನಲ್ಲಿ ವಾಟರ್ ಮೆನ್ ಆಗಿದ್ದ ಅವರು ಬಾಗೆ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿ ಪಂಕಜ ಹಾಗೂ ಈರ್ವರು ಪುತ್ರರನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here