ಗೌರಿ ಗಣೇಶ ಹಬ್ಬ ಹಿನ್ನೆಲೆ ಸರ್ಕಾರದಿಂದ ಮಾರ್ಗ ಸೂಚಿ ಬಿಡುಗಡೆ

0

ದಿನಾಂಕ: 30.08.2022 ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಪ್ರಕ್ರಿಯ ಸಾಮಾನ್ಯ ವಾಗಿದ್ದು, ಈ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಿಗೆ ನೀಡುವುದು ವಿವಿಧ ಇಲಾಖೆಗಳ ಬಹುದೊಡ್ಡ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಸಲು ಈ ಕೆಳಗಿನಂತೆ ಸೂಚನೆಗಳನ್ನು ನೀಡಲಾಗಿದೆ.

• ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್‌ ಸಂಪರ್ಕ ಇನ್ನು ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿ ಶಾಮಕ ಮತ್ತು ಪೋಲಿಸ್‌ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ನೀಡಲು ಸೂಕ್ತ ಕ್ರಮ ವಹಿಸುವುದು.

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚುರ ಪಡಿಸುವುದು.

• ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುವುದು.

ಪರವಾನಿಗೆ ನೀಡುವ ಮುನ್ನ, ಆಯೋಜಕರಿಂದ ಕಾಲಕಾಲಕ್ಕೆ ಮಾನ್ಯ ನ್ಯಾಯಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗೆ, ಮುಚ್ಚಳಿಕೆಯನ್ನು ಪಡೆಯುವುದು.

ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ, ಆಯೋಜಕರಿಂದ ಖಾತರಿಪಡಿಸಿಕೊಳ್ಳುವುದು, ಅಗತ್ಯವಿರುವ ಕಡೆ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.

• ವಿಶೇಷವಾಗಿ ಹೈ-ಟೆನ್ಸನ್ ತಂತಿ ಹಾದು ಹೋಗಿರುವ ವುದೇಶದಲ್ಲಿ ಯಾವುದೇ ಕಾರಣಕ್ಕೂ

ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಬಂಧಿಸುವುದು. * ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.

LEAVE A REPLY

Please enter your comment!
Please enter your name here