ಹಂಪಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ LIVE!

0

ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿಯ ಹಂಪಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ಉದ್ಘಾಟಿಸಿದರು.

ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಎಂಬ ಕಾರ್ಯಕ್ರಮದಡಿಯಲ್ಲಿ ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿಯ ಹಂಪಾಪುರ ಗ್ರಾಮಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಭೇಟಿ ನೀಡಿದರು.

ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ: ಹಂಪಾಪುರದಲ್ಲಿ ಸಡಗರದ ವಾತಾವರಣ

ಅರಕಲಗೂಡು ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿಂದು ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಅರ್. ಗಿರೀಶ್, ಶಾಸಕರಾದ ಎ.ಟಿ ರಾಮಸ್ವಾಮಿ ಹಾಗೂ ಇತರ ಅಧಿಕಾರಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು .ಗ್ರಾಮದ ಮಹಿಳೆಯರು , ಹೆಣ್ಣು ಮಕ್ಕಳು ಆರತಿ ಬೆಳಗಿ, ತಿಲಕ ಇಟ್ಟು ಬರ ಮಾಡಿಕೊಂಡರು.

ತಳಿರು ತೋರಣಗಳಿಂದ ಇಡೀ ಗ್ರಾಮ ಶೃಂಗಾರಗೊಂಡಿತ್ತು, ವಾದ್ಯ ಸಂಗೀತ, ಶಾಲಾ ಬ್ಯಾಂಡ್ ಜೊತೆಗೆ ಮೆರವಣಿಗೆಯೊಂದಿಗೆ ಗಣ್ಯರನ್ನು ಗ್ರಾಮದ ದೇವಾಲಯಕ್ಕೆ ಕರೆ ತರಲಾಯಿತು, ನಂತರ ಅತ್ಯಂತ ಪುರಾತನ ದೇವಾಲಯದಲ್ಲಿ ಶಾಸಕರಾದ ಎ.ಟಿ ರಾಮಸ್ವಾಮಿ, ಜಿಲ್ಲಾಧಿಕಾರಿ ಅರ್ ಗಿರೀಶ್, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹೇಶ್ ಮತ್ತಿತರರು ಪೂಜೆ ಸಲ್ಲಿಸಿದರು.

ನಂತರ ಅರಣ್ಯ ಇಲಾಖೆ ವತಿಯಿಂದ ಗ್ರಾಮದಲ್ಲಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಪಶುಪಾಲನಾ ಇಲಾಖಾ ವತಿಯಿಂದ ಏರ್ಪಡಿಸಿದ್ದ ಪಶುಗಳ ತಪಾಸಣೆ ಹಾಗೂ ಲಸಿಕಾ ಕಾರ್ಯಕ್ಕೂ ಚಾಲನೆ ನೀಡಲಾಯಿತು.

ನಂತರ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಾಯಿತು. ನೂರಾರು ಸಾರ್ವಜನಿಕರು ಪಾಲ್ಗೊಂಡು ತಮ್ಮ ಸಮಸ್ಯೆ ತೋಡಿಕೊಂಡರು.

LEAVE A REPLY

Please enter your comment!
Please enter your name here