ಹಾರನಹಳ್ಳಿ ಶ್ರೀ ಸೋಮೇಶ್ವರ ದೇವಾಲಯ ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆಗೆ ತಲುಪಿರುವ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ಇಂದು ಜಿಲ್ಲಾಧಿಕಾರಿ ಗಿರೀಶ್ ರವರು ಹಿರಿಯ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರತಿ ತಿಂಗಳು ದೇವಾಲಯ ಆವರಣವನ್ನು ಸ್ವಚ್ಚತಾ ಮಾಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ರಾಜ್ಯ ಪುರಾತತ್ವ ಇಲಾಖೆಯ ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಸೋಮೇಶ್ವರ ದೇವಾಲಯ ಸಂರಕ್ಷಣೆ ಮಾಡುವುದಾಗಿ ತಿಳಿಸಿದರು.
ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಇಓ, ತಾಲ್ಲೂಕು ದಂಡಾಧಿಕಾರಿ/ತಹಶೀಲ್ದಾರ್, ಮುಜರಾಯಿ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು