ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಎಚ್ಚರಿಕೆ

0

ಕಾವೇರಿ ನದಿ ಹರಿಯುವ ಅರಕಲಗೂಡು ತಾಲ್ಲೂಕಿನ ಗ್ರಾಮಸ್ಥರಿಗೆ ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರುಗಳ ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ.

ದಿನಾಂಕ 15.07.2021

  • ಹಾರಂಗಿ ಪುನರ್ವಸತಿ ವಿಭಾಗ , ಕುಶಾಲನಗರ

LEAVE A REPLY

Please enter your comment!
Please enter your name here