ಪ್ರವೇಶ ಬ್ರೋಚರ್ ರಚನೆಯಲ್ಲಿ ಶ್ರೀಮತಿ ಎಲ್.ವಿ.(ಸರ್ಕಾರಿ) ಪಾಲಿಟೆಕ್ನಿಕ್ ಕಾಲೇಜಿಗೆ 3ನೇಸ್ಥಾನ

0

ರಾಜ್ಯದ ಪಾಲಿಟೆಕ್ನಿಕ್‍ಗಳ ಪ್ರವೇಶ ಪ್ರಕ್ರಿಯೆಯಲ್ಲಿ 2020 – 21ನೇ ಸಾಲಿನಲ್ಲಿ ಪ್ರವೇಶ ಬ್ರೋಚರ್ (Pಡಿosಠಿeಛಿಣus) ರಚನೆ ಚಟುವಟಿಕೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿಷ್ಟಿತ ಪಾಲಿಟೆಕ್ನಿಕ್ ನಲ್ಲಿ ಒಂದಾದ ಹಾಸನ ನಗರದ ಶ್ರೀಮತಿ ಎಲ್.ವಿ.(ಸರ್ಕಾರಿ) ಪಾಲಿಟೆಕ್ನಿಕ್ ಕಾಲೇಜು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಆಗಸ್ಟ್ 12 ರಂದು ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್ ಅಶ್ವತ್‍ನಾರಾಯಣರವರು ಶ್ರೀಮತಿ ಎಲ್.ವಿ.(ಸರ್ಕಾರಿ) ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ವೆಂಕಟೇಶ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಿ.ಕುಮಾರನಾಯಕ,, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಪ್ರದೀಪ್ ಪಿ , ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಆರ್.ಮಂಜುನಾಥ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here