ಪವರ್ ಟಿವಿ ಸುದ್ದಿವಾಹಿನಿ ಪ್ರಸಾರ ಬಂದ್ ಮಾಡಿರುವ ಕ್ರಮ ಖಂಡಿಸಿ ಹಾಗೂ ವಾಹಿನಿ ಪ್ರಸಾರ ಸ್ಥಗಿತಗೊಳಿಸಿರುವುದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರ ಮೂಲಕ ಬುಧವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷರಾದ ಎಸ್.ಆರ್.ಪ್ರಸನ್ನಕುಮಾರ್, kuwj ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರವಿ ನಾಕಲಗೂಡು, ರಾಷ್ಟ್ರೀಯ ಮಂಡಳಿ ಸದಸ್ಯ ಅತೀಖುರ್ ರೆಹಮಾನ್, ಉಪಾಧ್ಯಕ್ಷ ಹಿಂದೂ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ನಗರ ಕಾರ್ಯದರ್ಶಿ ಸಿ.ಬಿ.ಸಂತೋಷ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ವಿದ್ಯುನ್ಮಾನ ಮಾಧ್ಯಮಗಳ ಜಿಲ್ಲಾ ವರದಿಗಾರರು ಹಾಜರಿದ್ದರು.
Home Hassan Taluks Hassan ಪವರ್ ಟಿವಿ ಸುದ್ದಿವಾಹಿನಿ ಪ್ರಸಾರ ಬಂದ್ ಮಾಡಿರುವ ಕ್ರಮ ಖಂಡಿಸಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ...