ಹಾಸನ ಜಿಲ್ಲೆಗಳಲ್ಲಿ ಬಾಕಿ ಉಳಿದಿರುವ ರಸ್ತೆ ಮತ್ತು ರೈಲ್ವೆ ಕಾಮಗಾರಿಗಳ ಹಣ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನಗರ ಸಭೆ ಮತ್ತು ಪಂಚಾಯ್ತಿಗಳಿಂದ ನೀಡುವ ಮನೆಗಳನ್ನು ಶೀಘ್ರವಾಗಿ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಖಾಲಿ ಇರುವ ನಿವೇಶನಗಳನ್ನು ಬಿ.ಎಲ್.ಒ. ಮಾಡಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಂತೆ ಅಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯವರು ನಿರ್ದೇಶಿಸಿದರು.
ನಿವೇಶನಗಳ ಹಂಚಿಕೆಯಲ್ಲಿ ಬಾಕಿ ಉಳಿಸಿಕೊಂಡಿರುವ ಜಿಲ್ಲೆಗಳು ಶೀಘ್ರವಾಗಿ ಹಂಚಿಕೆ ಮಾಡುವಂತೆ ಸೂಚನೆ ನೀಡಿದರಲ್ಲದೇ ಇಲ್ಲದೇ ಇರುವ ಜಿಲ್ಲೆಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಚುನಾವಣೆ ನಡೆಸುತ್ತಿರುವ ಜಿಲ್ಲೆಗಳು ನಂತರ ಹಂಚಿಕೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.
ಕೆ.ಪಿ.ಟಿ.ಸಿ.ಎಲ್ ವಿಭಾಗಗಳ ನಿರ್ಮಾಣಕ್ಕೆ ಜಿಲ್ಲೆಗಳಲ್ಲಿ ಖಾಲಿ ಇರುವ ನಿವೇಶನಗಳನ್ನು ಶೀಘ್ರವಾಗಿ ಗುರುತಿಸಿ ಕೆ.ಪಿ.ಟಿ.ಸಿ.ಎಲ್ ವಿಭಾಗಕ್ಕೆ ಹಸ್ತಾಂತರಿಸುವಂತೆ ಟಿ.ಎಂ.ವಿಜಯ್ ಭಾಸ್ಕರ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್, ಉಪ ವಿಭಾಗಾಧಿಕಾರಿಗಳಾದ ಡಾ|| ನವೀನ್ ಭಟ್, ಗಿರೀಶ್ ನಂದನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.