ಜುಲೈ 2ರಂದು 4000
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ – ಪ್ರೀತಮ್ ಜೆ ಗೌಡ

0

ಶಿಕ್ಷಣದಲ್ಲಿ ಉನ್ನತ ಸ್ಥಾನದ ಜೊತೆಗೆ ತಂದೆ-ತಾಯಿಗೆ ಉತ್ತಮ ಮಕ್ಕಳಾಗಿ

ಶಾಸಕ ಪ್ರಿತಮ್ ಜೆ. ಗೌಡ ಕಿವಿಮಾತು

ಹಾಸನ : ಶಿಕ್ಷಣದಲ್ಲಿ ಹೆಚ್ಚಿನ ಅಂಕ ಪಡೆದು ಉನ್ನತ ಸ್ಥಾನಕ್ಕೆ ಹೋಗುವ ಜೊತೆಯಲ್ಲಿ ತಂದೆ-ತಾಯಿಗೆ ಒಳ್ಳೆಯ ಮಕ್ಕಳಾಗಿ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಪೀತಮ್ ಜೆ. ಗೌಡ ಮಕ್ಕಳಿಗೆ ಕಿವಿಮಾತು ಹೇಳಿದರು.

ನಗರದ ಜಿಲ್ಲಾಧಿಕಾರಿಯ ನ್ಯಾಯಾಲಯ ಸಭಾಂಗಣದಲ್ಲಿ ತಾಲೂಕಿನ ಎಸ್ ಎಸ್ ಎಲ್ ಸಿಯಲ್ಲಿ 625 ಕ್ಕೆ 625 ಅಂಕ ಪಡೆದ

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಮಕ್ಕಳಿಗೆ ಆಸ್ತಿ ಮಾಡುತ್ತಿದ್ದರೂ ಆದರೇ ಪ್ರಸ್ತುತದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನೆ ಆಸ್ತಿಯನ್ನಾಗಿ ಮಾಡುತ್ತಿರುವುದು ಉತ್ತಮವಾಗಿದೆ. ಹಾಸನ ಜಿಲ್ಲೆ ರಾಜಕೀಯವಾಗಿ ರಾಜ್ಯದಲ್ಲಿಯೇ ಹೆಸರುಮಾಡಿದೆ ಅಲ್ಲದೆ ಜಿಲ್ಲೆಯ ಆಲೂಗಡ್ಡೆ ಕೃಷಿ ಪ್ರಸಿದ್ಧಿ ಪಡೆಯುತ್ತಿರುವಂತೆ. ಇದೀಗ ಹತ್ತನೇ ತರಗತಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ತಂದುಕೊಟ್ಟಿದ್ದಾರೆ. ಇವರ ಸಾಧನೆ ಇದೇ ರೀತಿ ಮುಂದುವರೆದು ಪೋಷಕರಿಗೆ ಹಾಗೂ ಶಿಕ್ಷಕರಿಗೆ ಮತ್ತಷ್ಟು ಕೀರ್ತಿ ತರಲಿ ಎಂದು ಅಭಿನಂದಿಸಿದರು. ಹಿಂದೆ ಪೋಷಕರು ಮಕ್ಕಳ ಮುಂದಿನ ಭವಿಷ್ಯಕ್ಕೆ ಆಸ್ತಿಯನ್ನು ಮಾಡುತ್ತಿದ್ದರು. ಆದರೆ ಇದೀಗ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಆರ್ಥಿಕ ಚೈತನ್ಯಕ್ಕೆ ಪೂರಕವಾದ ವಾತಾವರಣ ನಿರ್ಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ನಗರದ ಮಲೆನಾಡು ತಾಂತ್ರಿಕ ಶಿಕ್ಷಣ ಕಾಲೇಜಿನ ಸಭಾಂಗಣದಲ್ಲಿ ಸುಮಾರು 4೦೦೦ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹಾಗೂ ನಗದು ಬಹುಮಾನವನ್ನು ನೀಡಲಾಗುವುದು ಎಂದು ಪ್ರೀತಮ್ ಗೌಡ ತಿಳಿಸಿದರು . 2021 -22ನೇ ಸಾಲಿನಲ್ಲಿ ೮೫ ರಿಂದ 1೦೦ ಪ್ರತಿಶತ ಅಂಕ ಗಳಿಸಿರುವ ಸುಮಾರು 18೦೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಪ್ರತಿ ವಿದ್ಯಾರ್ಥಿಗೆ ಐದು ಸಾವಿರ ನಗದು ಒಂದು ಬ್ಯಾಗ್ ಹಾಗೂ ಅಭಿನಂದನಾ ಪತ್ರ ನೀಡಲಾಗುತ್ತಿದೆ. ಹಾಗೂ ಶೇಕಡ 7೦ ರಿಂದ 85 ಅಂಕಗಳಿಸಿದ ಸುಮಾರು 12೦೦ ವಿದ್ಯಾರ್ಥಿಗಳಿಗೆ ಮೂರು ಸಾವಿರ ನಗದು ಹಾಗೂ ಬ್ಯಾಗ್ ಮತ್ತು ಪ್ರಶಂಸಾ ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮತ್ತು ಮುಂಬರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ .ಪ್ರತಿವರ್ಷವೂ ಇದೇ ರೀತಿಯ ಕಾರ್ಯಕ್ರಮ ಆಯೋಜನೆಗೆ ನಾನು ಹಾಗೂ ನನ್ನ ಸ್ನೇಹಿತರ ಬಳಗದ ವತಿಯಿಂದ ಯೋಜನೆ ರೂಪಿಸಲಾಗುತ್ತಿದೆ ಎಂದು ಪ್ರೀತಮ್ ಗೌಡ ತಿಳಿಸಿದರು.

ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಮಾತನಾಡಿ, ಶಿಕ್ಷಣ ಎಂದರೇ ಕೇವಲ ಶಿಕ್ಷಣಕ್ಕೆ ಸೀಮಿತವಾಗದೇ ಸಮಾಜಕ್ಕೆ ಕೊಡುಗೆ ಕೊಡುವ ಕೆಲಸ ಮಾಡಬೇಕು. ದೇಶದಲ್ಲಿ ಶಿಕ್ಷಣ ಕ್ರಾಂತಿ ಯಾಗುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳು ಹೊರ ಬರುತ್ತಿದ್ದಾರೆ. ಅಮೇರಿಕದ ನಾಸಾ ಬಾಹ್ಯಾಕಾಶ ಕೇಂದ್ರದಲ್ಲಿ ಶೇಕಡ 4೦ ರಷ್ಟು ಭಾರತೀಯರ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕು ಶಿಕ್ಷಣದೊಂದಿಗೆ ಇತರೆ ಕ್ಷೇತ್ರದಲ್ಲಿ ಸಹ ನೈಪುಣ್ಯತೆ ಹೊಂದುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ನಾನಾ ಕ್ಷೇತ್ರಗಳಲ್ಲಿ ಸ್ವ-ಉದ್ಯೋಗವನ್ನು ಪಡೆಯಬಹುದಾಗಿದೆ ಎಂದು ಕಿವಿಮಾತು ಹೇಳಿದರು.ಸಲಹೆ ನೀಡಿದರು.

​ ​ ​ ​ ​ ​ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತ ರಾಜ್ ಅವರು ಮಾತನಾಡಿ, ಓದುವ ವೇಳೆ ಬೇರೆ ಕಡೆ ಯಾವ ಗಮನಹರಿಸಬಾರದು. ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರದಲ್ಲಿಯೂ ಮುಂದೆ ಬರಬೇಕು. ಉತ್ತಮ ಆಡಳಿತ ನೀಡುವ ಮೂಲಕ ರಾಜಕೀಯದಲ್ಲಿ ಸಹ ವಿದ್ಯಾರ್ಥಿಗಳು ಯಶಸ್ಸು ಕಂಡುಕೊಳ್ಳಬಹುದಾಗಿದೆ. ತಂದೆ ತಾಯಿಗಳ ಆಸೆ- ಆಕಾಂಕ್ಷೆಗಳು ಮರಿಚಿಕೆ ಯಾಗದಂತೆ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

​ ​ ​ ​ ಈ ಸಂದರ್ಭದಲ್ಲಿ ಡಿಡಿಪಿಐ ಕಾಂತರಾಜ್, ವಾರ್ತಾಧಿಕಾರಿ ವಿನೋದ ಚಂದ್ರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here