ಹಾಸನ: ಬೆಂಗಳೂರು– ಹಾಸನ ನಡುವೆ ಏ. 8ರಿಂದ ‘ಡೆಮು ರೈಲು’ ಸಂಚಾರ ಆರಂಭ
ಬೆಂಗಳೂರು ಸಿಟಿ – ಹಾಸನ ನಡುವೆ ಡೆಮು ರೈಲು ಸಂಚಾರ ಆರಂಭಿಸಬೇಕು ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಮಾಡಿದ ಮನವಿಗೆ ಸ್ಪಂದನೆ ಸಿಕ್ಕಿದೆ.
ಭಾನುವಾರ ಹೊರತುಪಡಿಸಿ ವಾರ ದಲ್ಲಿ 6 ದಿನ ಸಂಚರಿಸುವ ಈ ರೈಲು ನಿತ್ಯ ಬೆಳಿಗ್ಗೆ 9.45ಕ್ಕೆ ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಹೊರಟು ಯಶವಂತಪುರ ರೈಲು ನಿಲ್ದಾಣಕ್ಕೆ 9.57ಕ್ಕೆ ಬರಲಿದೆ. ಅಲ್ಲಿಂದ 9.59ಕ್ಕೆ ಹೊರಟು ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ ಮಾರ್ಗವಾಗಿ 1.45ಕ್ಕೆ ಹಾಸನ ರೈಲು ನಿಲ್ದಾಣ ತಲುಪಲಿದೆ. ನಂತರ ಹಾಸನ ರೈಲು ನಿಲ್ದಾಣದಲ್ಲಿ ಸುಮಾರು ಅರ್ಧ ಗಂಟೆ ನಿಲುಗಡೆ ನಂತರ ಮಧ್ಯಾಹ್ನ 2.15ಕ್ಕೆ ಬೆಂಗಳೂರಿಗೆ ಹೊರಡುವ ಡೆಮು ರೈಲು ಬೆಂಗಳೂರು ಸಿಟಿ ನಿಲ್ದಾಣಕ್ಕೆ ಸಂಜೆ 6ಗಂಟೆ ತಲುಪಲಿದೆ.
ಬಸ್ ಪ್ರಯಾಣ ದರ ದುಬಾರಿಯಾಗುತ್ತಿರುವ ಈಗಿನ ಸಂದರ್ಭದಲ್ಲಿ ಕಡಿಮೆ ವೆಚ್ಚದಲ್ಲಿ ರೈಲುಗಳಲ್ಲಿ ಪ್ರಯಾಣ ಮಾಡಬಹುದು. ಹಾಸನ ಮತ್ತು ತುಮಕೂರು ಜಿಲ್ಲೆಯ ಜನರು ಡೆಮು ರೈಲು ಸಂಚಾರದ ಸೌಲಭ್ಯವನ್ನು ಬಳಸಿಕೊಳ್ಳಬಹುದು (ರೈಲು ಮೆಜೆಸ್ಟಿಕ್ ನಿಲ್ದಾಣ ತಲುಪಿದ ನಂತರ ದೇವನಹಳ್ಳಿ ಚಿಕ್ಕಬಳ್ಳಾಪುರ ಮಾರ್ಗವಾಗಿ ಮರುದಿನ ಹಾಸನಕ್ಕೆ ಬರುವುದರಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ತೆರಳುವ ಪ್ರಯಾಣಿಕರಿಗೂ ಅನುಕೂಲವಾಗಲಿದೆ)
” ಹಾಸನ– ಬೆಂಗಳೂರು ನಡುವಿನ ರೈಲು ಮಾರ್ಗದ ವಿದ್ಯುದ್ದೀಕರಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಶೀಘ್ರ ಆರಂಭವಾಗಲಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಇನ್ನೂ ಹೆಚ್ಚು ರೈಲು ಸಂಚಾರ ಆರಂಭವಾಗುವ ನಿರೀಕ್ಷೆಯಿದೆ ” -TPಲೊಕೇಶ್ )ಕರ್ನಾಟಕ ರೈಲ್ವೆ ವೇದಿಕೆ ಸಂಚಾಲಕ)