ಹಾಸನ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮುಗಲಭೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪಠ್ಯಪುಸ್ತಕ ಪರಿಷ್ಕರಣೆ ಸೇರಿದಂತೆ ಜನರಿಗೆ ತೊಂದರೆ ನೀಡುವ ಕೆಲಸ ಮಾಡುತ್ತಿದೆ , ವಿರೋಧಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ನಾಯಕರನ್ನು ಹತ್ತಿಕ್ಕಲು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಯನ್ನು ವಿರೋಧಿಸಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಯನ್ನು ಮಾಡುತ್ತಿದೆ ಎಂದು
-ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ದೂರಿದರು.
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಗುರುವಾರ ನಗರದ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ನೂರಾರು ಕಾರ್ಯಕರ್ತರು, NR ಸರ್ಕಲ್‌ಗೆ ತೆರಳಿ ಮಾನವ ಸರಪಳಿ ನಿರ್ಮಿಸಿದರು. ರಸ್ತೆಯಲ್ಲಿ ಮಲಗಿ ರಸ್ತೆ ತಡೆ ನಡೆಸಿದರು.ಪೊಲೀಸರ ಜೊತೆ ವಾಗ್ವಾದ ನಡೆಸಿದ ಕಾರ್ಯಕರ್ತರು, ಬಸ್‌ಗೆ ಅಡ್ಡ ಮಲಗಿದರು, ಟಯರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಭ್ರಷ್ಟಾಚಾರ ಪ್ರಶ್ನೆ ಮಾಡುವವರನ್ನು ಬಾಯಿ ಮುಚ್ಚಿಸುವ ಮತ್ತು ಪ್ರತಿಭಟನೆ ಮಾಡುತ್ತಿರುವವರನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು’ – ಕಾಂಗ್ರೆಸ್ ಮುಖಂಡ ಎಚ್.ಕೆ. ಮಹೇಶ್
ರಾಜ್ಯಸಭಾ ಮಾಜಿ ಸದಸ್ಯ HK ಜವರೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ MA ಗೋಪಾಲಸ್ವಾಮಿ , ದೇವರಾಜೇಗೌಡ, ಬನವಾಸೆ ರಂಗಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಬಾಗೂರು ಮಂಜೇಗೌಡ, ಪಟೇಲ್ ಶಿವಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.